ಶಿವಮೊಗ್ಗ: ಮುಡಾ ಹಗರಣ (MUDA Scam) ಕುರಿತು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಕೊಟ್ಟಿರುವ ಬಗ್ಗೆ ನ್ಯಾಯಾಲಯದ ತೀರ್ಪು ಬರುವ ಮೊದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ಸಲಹೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ನೂರಕ್ಕೆ ನೂರು ಬರುತ್ತದೆ. ತೀರ್ಪು ಬಂದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಯಾಕೆಂದರೆ ಸಿಎಂ ಸಿದ್ದರಾಮಯ್ಯ ಮಾಡಿರುವ ಹಗರಣಗಳು ಸಾರ್ವಜನಿಕವಾಗಿದೆ ಎಂದರು. ಇದನ್ನೂ ಓದಿ: ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಗಾದಿ ಹಿಡಿದ ಕಾಂಗ್ರೆಸ್ – ಬಿಜೆಪಿಗೆ ಮುಖಭಂಗ
Advertisement
Advertisement
ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಿಂತ ಮೊದಲೇ ಗೌರವಯುತವಾಗಿ ರಾಜೀನಾಮೆ ಕೊಡೋದು ಒಳ್ಳೆಯದು. ಅವರು ಮಾಡಿರುವ ಎಲ್ಲಾ ಹಗರಣ ಸಾಬೀತಾಗುತ್ತಿವೆ. ಮುಡಾ ಹಗರಣ ಜಗಜ್ಜಾಹೀರು ಆಗಿರುವ ಸಂಗತಿಯಾಗಿದೆ. ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ವರದಿ ವಿಚಾರದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರ್ಕಾರಕ್ಕೆ ಸ್ವತಂತ್ರ ಇದೆ. ಯಾವುದೇ ತೀರ್ಮಾನ ತೆಗೆದುಕೊಳ್ಳಲಿ ಎಂದು ಹೇಳಿದರು ಇದನ್ನೂ ಓದಿ: ರಾಜಸ್ಥಾನ ಪೊಲೀಸ್ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ
Advertisement
Advertisement
ನಾವು ಯಾವುದೇ ಹೋರಾಟ ಮಾಡಲ್ಲ. ರಾಜ್ಯಪಾಲರು ಇನ್ನುಳಿದ ನಾಲ್ವರು ಸಚಿವರಿಗೆ ನೋಟಿಸ್ ಕೊಟ್ಟಿರುವ ವಿಚಾರದ ಬಗ್ಗೆ ಅವರು ಸರ್ವ ಸ್ವತಂತ್ರ ಇದ್ದಾರೆ. ಎಲ್ಲರಿಗೂ ನೋಟಿಸ್ ಕೊಟ್ಟಿದ್ದಾರೆ. ಏನು ಬೇಕಾದರೂ ತೀರ್ಮಾನ ತೆಗೆದುಕೊಳ್ಳಲಿ. ರಾಜ್ಯಪಾಲರು ನೋಟಿಸ್ ಕೊಟ್ಟಿದ್ದಾರೆ. ಏನು ಮಾಡುತ್ತಾರೋ ನೋಡೋಣ. ಸಿದ್ದರಾಮಯ್ಯ ಅವರ ತನಿಖೆ ಬಹುತೇಕ ಮುಗಿಯುವ ಹಂತ ತಲುಪಿದೆ. ಅವರು ರಾಜೀನಾಮೆ ಕೊಡಬೇಕಾಗುತ್ತದೆ ಎಂದರು. ಇದನ್ನೂ ಓದಿ: ಬಿಹಾರದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿದ್ದ ವೇಳೆ ಕುಸಿದ ಟಿನ್ ಶೆಡ್ – ನೂರಾರು ಜನರಿಗೆ ಗಾಯ, 10 ಮಂದಿ ಗಂಭೀರ