ಬೆಂಗಳೂರು: ಆಯುಷ್ಮಾನ್ ಭಾರತ್ (Ayushman Bharat) ಹಾಗೂ ಆರೋಗ್ಯ ಕರ್ನಾಟಕ (Arogya Karnataka) ವಿಮೆ ಯೋಜನೆಗೆ ಕೇಂದ್ರ ಸರ್ಕಾರ 60% ರಷ್ಟು ಅನುದಾನ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಡೆಹ್ರಾಡೂನ್ ಸ್ವಾಸ್ಥ್ಯ ಚಿಂತನ ಶಿಬಿರದಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅವರು ಆಯುಷ್ಮಾನ್ ಭಾರತ್ ಯೋಜನೆಗೆ ಕೇಂದ್ರದಿಂದ ಹೆಚ್ಚಿನ ನೆರವಿನ ಅಗತ್ಯತೆ ಇದೆ. ಯೋಜನೆಗೆ ಕೇಂದ್ರದ ನೆರವಿನ ಕುರಿತು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಂಡೋವಿಯಾ ಅವರ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಫ್ಲೈಓವರ್‌ನಲ್ಲೇ ಸ್ಕೂಟರ್ ಅಡ್ಡಗಟ್ಟಿ 1.70 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ
Advertisement
Advertisement
ABPMJAY ಸ್ಕೀಮ್‍ನಲ್ಲಿ ಕರ್ನಾಟಕವು ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಅದರೂ ಆಯುಷ್ಮಾನ್ ಯೋಜನೆಯಡಿ ಆರೋಗ್ಯ ಕರ್ನಾಟಕ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದಿಂದ ನೀರಿಕ್ಷಿತ ಹಣಕಾಸಿನ ನೆರವು ದೊರೆಯುತ್ತಿಲ್ಲ. ಪ್ರಸ್ತುತ ರಾಜ್ಯ ಸರ್ಕಾರ 64% ರಷ್ಟು ಹಣಕಾಸಿನ ನೆರವು ನೀಡುತ್ತಿದೆ. ಕೇಂದ್ರ ಸರ್ಕಾರ 36% ರಷ್ಟು ಮಾತ್ರ ಅನುದಾನ ಒದಗಿಸುತ್ತಿದೆ. 64% ರಷ್ಟು ಹಣಕಾಸನ್ನ ರಾಜ್ಯ ಸರ್ಕಾರವೇ ಭರಿಸುತ್ತಿದೆ ಎಂದಿದ್ದಾರೆ.
Advertisement
Advertisement
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಕೇಂದ್ರ ಸರ್ಕಾರ 60% ರಷ್ಟು ಹಣಕಾಸಿನ ನೆರವು ನೀಡಿದರೆ ಹೆಚ್ಚಿನ ಜನರಿಗೆ ಯೋಜನೆಯನ್ನ ತಲುಪಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 60% ರಾಜ್ಯ ಸರ್ಕಾರ 40% ದರಗಳಲ್ಲಿ ಕಾರ್ಯನಿರ್ವಹಿಸುವ ಅಗತ್ಯವಿದೆ. ಸಾರ್ವಜನಿಕರ ಆರೋಗ್ಯ ಭದ್ರತೆ ಉದ್ದೇಶದಿಂದ ಆರಂಭ ಆಗಿರುವ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಕೇಂದ್ರ ನಿರ್ಣಯ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸ್ವಾಸ್ಥ್ಯ ಚಿಂತನ ಶಿಬಿರದ ಎರಡನೇ ದಿನವಾದ ಶನಿವಾರ ಆಯುಷ್ಮಾನ್ ಭವ ವಿಚಾರ ಸಂಕಿರಣದಲ್ಲಿ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡಿದ್ದರು. ಇದನ್ನೂ ಓದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್? – ಕಾರ್ಯಕರ್ತರ ಸಭೆಯಲ್ಲಿ ಇಂಗಿತ
Web Stories