ಸಾಬ್ರುಗೂ ಎರಡು ಮಕ್ಕಳು ಮಾಡಿಕೊಳ್ಳಿ ಅಂತ ಸಿಎಂ ಹೇಳಲಿ – ಅಶೋಕ್ ಕಿಡಿ

Public TV
1 Min Read
R Ashok bengaluru

ಬೆಂಗಳೂರು: ಸಾಬ್ರುಗೂ ಎರಡು ಮಕ್ಕಳು ಮಾಡಿಕೊಳ್ಳಿ ಅಂತ ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R Ashok) ಕಿಡಿಕಾರಿದ್ದಾರೆ.ಇದನ್ನೂ ಓದಿ: ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಆಸ್ತಿ ರಕ್ಷಿಸಿಕೊಳ್ಳಲು ಶ್ರೀಮಂತರಿಂದ ಗಂಟೆಗೆ 1.7 ಲಕ್ಷ ಪಾವತಿ

ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ ಹಿಂದೂಗಳು ಎರಡೇ ಮಕ್ಕಳು ಮಾಡಿಕೊಳ್ಳಿ ಎಂಬ ಸಿಎಂ ಸಿದ್ದರಾಮಯ್ಯ ಸಲಹೆಗೆ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಇದನ್ನು ಹೋಗಿ ಸಾಬರಿಗೆ ಹೇಳುತ್ತಾರಾ? ಹಿಂದೂಗಳ ಸಂಖ್ಯೆ ಕಡಿಮೆ ಆಗಲಿ, ಮುಸ್ಲಿಮರ ಸಂಖ್ಯೆ ಹೆಚ್ಚಾಗಲಿ ಎಂದು ಸಿದ್ದರಾಮಯ್ಯ ಕುತಂತ್ರ ಮಾಡಿದ್ದಾರೆ. ಸಿಎಂ ಓಲೈಕೆ ಮಾಡುವುದನ್ನು ಬಿಡಬೇಕು. ಇದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಮೊನ್ನೆ ಸ್ವಾಮೀಜಿಗಳು ಹಿಂದೂಗಳು ಜಾಸ್ತಿ ಮಕ್ಕಳು ಮಾಡಿಕೊಳ್ಳಿ ಎಂದು ಹೇಳಿದ್ದಕ್ಕೆ ಕೌಂಟರ್ ಆಗಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಆರೋಪ ಮಾಡಿದರು.ಇದನ್ನೂ ಓದಿ: ಸಿಎಂ ತಂಡಕ್ಕೆ ವಾರ್ನಿಂಗ್‌ ಕೊಟ್ಟ ಸುರ್ಜೇವಾಲ

 

Share This Article