ಬೆಂಗಳೂರು: ಸಚಿವರ ಹೆಸರಿನಲ್ಲಿ ಕಮೀಷನ್ ಕೇಳಿದ ಪ್ರಕರಣ ತನಿಖೆ ಆಗಲಿ ಎಂದು ಸಚಿವ ಯುಟಿ. ಖಾದರ್ (UT Khader) ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕ ಅಶೋಕ್ ರೈ (Ashok Rai) ಅವರಿಂದ 7% ಕಮೀಷನ್ ಆರೋಪ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವರ ಹೆಸರು ಹೇಳಿ ಕಮೀಷನ್ ತಗೋತಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಗ್ರಾಮೀಣಾಭಿವೃದ್ದಿ ಸಚಿವರು ತಕ್ಷಣ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಗೆ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಸಚಿವರಿಗೂ ನಾನು ತನಿಖೆ ಮಾಡೋಕೆ ಮನವಿ ಮಾಡಿದ್ದೆ. ಸಿಎಂ ಅವರಿಗೂ ಪತ್ರ ಬರೆದು ಮನವಿ ಮಾಡಿದ್ದೇನೆ. ಸತ್ಯಾಂಶ ಹೊರಗೆ ಬರಲಿ ಎಂದಿದ್ದಾರೆ. ಇದನ್ನೂ ಓದಿ: ಭಾರತದ ಜಿಡಿಪಿ 7.8% ಬೆಳವಣಿಗೆ ಅನ್ನೋದೆ ಬೋಗಸ್: ಸಂತೋಷ್ ಲಾಡ್
ಯಾರು ಹಣ ಕೇಳಿದ್ರು ಗೊತ್ತಿಲ್ಲ. ತನಿಖೆ ಆಗಲಿ ಸತ್ಯಾಂಶ ಹೊರಗೆ ಬರಲಿ. ಯಾವುದೇ ಪಕ್ಷದವರಾದರೂ ಕ್ರಮ ಆಗಲಿ. ಇದರ ಬಗ್ಗೆ ನಾನು ಹೆಚ್ಚು ಮಾತಾಡಲ್ಲ. ತನಿಖೆ ಆಗಲಿ ಎಂದು ಹೇಳಿದ್ದಾರೆ.
