ನವದೆಹಲಿ: ಕಳೆದ ಕೆಲವು ದಿನಗಳಿಂದ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಕುರಿತು ಬಿಸಿಸಿಐ (BCCI) ಮಾಜಿ ಅಧ್ಯಕ್ಷ ಹಾಗೂ ಟೀಂ ಇಂಡಿಯಾ (Team India) ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಕೊನೆಗೂ ಮೌನ ಮುರಿದಿದ್ದಾರೆ.
VIDEO | “Let them fight their battle. I don’t know what’s happening there, I just read in the newspapers. In the sports world, I realised one thing that you don’t talk about things you don’t have complete knowledge of,” says @SGanguly99 on wrestlers’ protest. pic.twitter.com/NjsaipIkyr
— Press Trust of India (@PTI_News) May 5, 2023
Advertisement
ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ನಡೆಸುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಯನ್ನು ದಾದಾ ಬೆಂಬಲಿಸಿದ್ದಾರೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು
Advertisement
ಕೋಲ್ಕತ್ತಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿರುವ ಅವರು, ಕುಸ್ತಿಪಟುಗಳು ತಮ್ಮ ಯುದ್ಧ ಮುಂದುವರಿಸಲಿ. ತಮ್ಮದೇ ಆದ ಹೋರಾಟಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನನ್ನನ್ನ ನೇಣಿಗಾದ್ರೂ ಹಾಕಿ, ಆದ್ರೆ ಕುಸ್ತಿ ನಿಲ್ಲಿಸಿದ್ರೆ ನಿಮ್ಮ ಭವಿಷ್ಯಕ್ಕೆ ಹಾನಿ – ಬ್ರಿಜ್‌ಭೂಷಣ್ ಭಾವುಕ ಹೇಳಿಕೆ
Advertisement
Advertisement
ನನಗೆ ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅಲ್ಲಿ ಏನಾಗುತ್ತಿದೆ ಎಂಬುದೂ ನನಗೆ ಗೊತ್ತಿಲ್ಲ. ಆದ್ರೆ ಅದರ ಬಗ್ಗೆ ಪತ್ರಿಕೆಗಳಲ್ಲಿ ಓದುತ್ತಿದ್ದೇನೆ. ಕುಸ್ತಿಪಟುಗಳು ಪದಕ ಗೆದ್ದು, ನಮ್ಮ ದೇಶಕ್ಕೆ ಕೀರ್ತಿ ತಂದಿದ್ದಾರೆ. ಶೀಘ್ರವೇ ಈ ಸಮಸ್ಯೆ ಬಗೆಹರಿಯಲಿದೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.
ಪೊಲೀಸರು – ಕುಸ್ತಿಪಟುಗಳ ನಡುವೆ ಜಟಾಪಟಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಮೇಲೆ ಕುಡಿದ ಅಮಲಿನಲ್ಲಿದ್ದ ಪೊಲೀಸರು ಬುಧವಾರ ರಾತ್ರಿ ಹಲ್ಲೆ ನಡೆಸಿರುವುದಾಗಿ ಕುಸ್ತಿಪಟುಗಳು ಆರೋಪಿಸಿದ್ದರು. ಪ್ರತಿಭಟನಾ ಸ್ಥಳಕ್ಕೆ ಹಾಸಿಗೆಗಳನ್ನು ತರಲು ಹೋಗಿದ್ದಾಗ ಪೊಲೀಸರು ಹಲ್ಲೆ ನಡೆಸಿರುವುದಾಗಿ ದೂರಿದ್ದರು. ಕೆಲವು ಕುಸ್ತಿಪಟುಗಳ ತಲೆಗೆ ಹೊಡೆತ ಬಿದ್ದಿದ್ದು, ಇಬ್ಬರಿಗೆ ಗಾಯಗಳಾಗಿವೆ. ಒಬ್ಬರು ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿಭಟನೆ ಬಳಿಕ ನೋವನುಭವಿಸಿದ ಕುಸ್ತಿಪಟುಗಳು ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಹೇಳಿದ್ದರು.