ಬೆಂಗಳೂರು: ಸೂರಜ್ ರೇವಣ್ಣ (Suraj Revanna) ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಸ್ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಪ್ರತಿಕ್ರಿಯಿಸಿದ್ದು, ಈಗಾಗಲೇ ಪ್ರಜ್ವಲ್ ರೇವಣ್ಣನ ವಿಚಾರದಲ್ಲಿ ತನಿಖೆ ನಡೆಯುತ್ತಿದೆ. ಸೂರಜ್ ರೇವಣ್ಣರ ವಿಚಾರದಲ್ಲೂ ನ್ಯಾಯಯುತ ತನಿಖೆ ಆಗಲಿ ಎಂದು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ನಾನು ಸಹ ಮಾಧ್ಯಮದಲ್ಲಿ ಸೂರಜ್ ರೇವಣ್ಣ ಬಗ್ಗೆ ನೋಡಿದ್ದೇನೆ. ಸೂರಜ್ ರೇವಣ್ಣ ಸಹ ಆರೋಪ ಮಾಡಿದ್ದಾರೆ. ನನ್ನನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕೇಸ್‌ನಲ್ಲಿ ಮೇಲ್ನೋಟಕ್ಕೆ ಗೊಂದಲ ಕಾಣಿಸುತ್ತಿದೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದರು. ಇದನ್ನೂ ಓದಿ: ಸೂರಜ್ ರೇವಣ್ಣ ಕೇಸ್- ದಯವಿಟ್ಟು ಇಂತಹ ವಿಷಯಗಳನ್ನ ನನ್ನ ಬಳಿ ಚರ್ಚೆ ಮಾಡ್ಬೇಡಿ: ಹೆಚ್‍ಡಿಕೆ
ನಿಷ್ಪಕ್ಷಪಾತವಾದ ತನಿಖೆ ಆಗಲಿ. ತಪ್ಪಿತಸ್ಥರು ಯಾರೇ ಇದ್ದರೂ ಕಾನೂನು ಕ್ರಮ ಆಗೇ ಆಗುತ್ತೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಒಳ್ಳೆಯದಲ್ಲ. ಎರಡೂ ಕಡೆ ದೂರು ದಾಖಲು ಆದ ಹಿನ್ನೆಲೆಯಲ್ಲಿ ಇದು ಜಟಿಲ ಕೇಸ್ ರೀತಿಯಲ್ಲಿ ಕಾಣಿಸುತ್ತಿದೆ. ಮೊದಲೇ ದೂರು ಕೊಟ್ಟಿದು ಸೂರಜ್ ರೇವಣ್ಣ. ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಸೂಕ್ತ ತನಿಖೆ ಆಗಲಿ, ಸತ್ಯಾಸತ್ಯತೆ ಹೊರ ಬರಲಿ. ಇದು ಜೆಡಿಎಸ್ ಆಂತರಿಕ ವಿಚಾರ. ಇದರ ಬಗ್ಗೆ ಅವರ ನಾಯಕರು ಮಾತನಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ