– ಎರಡು ವಾರದಲ್ಲಿ ಕೇಂದ್ರಕ್ಕೆ ಪ್ರತಿಕ್ರಿಯಿಸಲು ಸೂಚನೆ
ನವದೆಹಲಿ: ವಿವಿಧ ರಾಜ್ಯಗಳು ನ್ಯಾಯಾಲಯವನ್ನು ಸಂಪರ್ಕಿಸುವ ಬೆಳವಣಿಗೆ ಹೆಚ್ಚುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಈ ರೀತಿಯ ಯಾವುದೇ ಪೈಪೋಟಿ ಬೇಡ ಎಂದು ಸುಪ್ರೀಂಕೋರ್ಟ್ (Supreme Court) ಸಲಹೆ ನೀಡಿದೆ. ಬರ ಪರಿಹಾರ ನಿಧಿ (Drought Relief Funds) ಬಿಡುಗಡೆಗೆ ನಿರ್ದೇಶನ ಕೋರಿ ಕರ್ನಾಟಕ ಸರ್ಕಾರ (Government of Karnataka) ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ (Central Government) ಸೂಚಿಸಿದೆ.
Advertisement
ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಬಿ.ಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ನೇತೃತ್ವದ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸ್ಪರ್ಧೆ ಬೇಡ ಎಂದು ಪೀಠ ಕಿವಿಮಾತು ಹೇಳಿದೆ. ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಕಪಿಲ್ ಸಿಬಲ್ ಇನ್ನೊಂದು ತಿಂಗಳಲ್ಲಿ ಬರ ಪರಿಹಾರ ಬಿಡುಗಡೆ ಬಗ್ಗೆ ಕೇಂದ್ರ ಸರ್ಕಾರ ನಿರ್ಧರಿಸಬೇಕು ಎಂದರು. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕೆ.ಕವಿತಾ ಬಂಧನ – ಜಾಮೀನು ನೀಡಲು ದೆಹಲಿ ಕೋರ್ಟ್ ನಿರಾಕರಣೆ
Advertisement
Advertisement
ಕೇಂದ್ರ ಸರ್ಕಾರದ ಪರ ವಾದಿಸಿದ ಸಾಲಿಸಿಟರ್ ಜನರಲ್ (ಎಸ್‍ಜಿ) ತುಷಾರ್ ಮೆಹ್ತಾ, ಆರ್ಟಿಕಲ್ 32ರ ಅಡಿಯಲ್ಲಿ ಅರ್ಜಿ ಸಲ್ಲಿಸುವ ಬದಲು ರಾಜ್ಯ ಸರ್ಕಾರ ಕೇಂದ್ರದೊಂದಿಗೆ ಸಂವಹನ ನಡೆಸಬಹುದಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಪಿಲ್ ಸಿಬಲ್ ನೋಟಿಸ್ ನೀಡುವಂತೆ ಮನವಿ ಮಾಡಿದರು. ಮೆಹ್ತಾ ಮಧ್ಯಪ್ರವೇಶಿಸಿ ನೋಟಿಸ್ ನೀಡಬೇಡಿ, ಅನಗತ್ಯ ಸುದ್ದಿಯಾಗುತ್ತದೆ ಎಂದು ಮನವಿ ಮಾಡಿಕೊಂಡರು.
Advertisement
ಬಳಿಕ ಪ್ರತಿಕ್ರಿಯಿಸಿದ ನ್ಯಾಯಾಲಯ, ಎರಡು ವಾರದಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ಪ್ರತಿಕ್ರಿಯೆ ನೀಡಿ ಎಂದು ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ ಮತ್ತು ಈ ವಿಷಯದಲ್ಲಿ ಹಾಜರಾಗಿದ್ದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ಸೂಚಿಸಿತು.
ವಿಚಾರಣೆಯಲ್ಲಿ ಭಾಗಿಯಾದ ಬಳಿಕ ದೆಹಲಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಸಮಸ್ಯೆ ಬಗೆಹರಿಸುತ್ತೇವೆ ಎಂದು ಸುಪ್ರೀಂಕೋರ್ಟ್‍ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ಇಂದಿನ ವಿಚಾರಣೆಯಲ್ಲಿ ಅಟಾರ್ನಿ ಜನರಲ್ ಹಾಗೂ ಸಾಲಿಸಿಟರ್ ಜನರಲ್ ಇಬ್ಬರೂ ಹಾಜರಾಗಿದ್ದರು. ಎರಡು ವಾರದಲ್ಲಿ ಪ್ರತಿಕ್ರಿಯೆ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು.
ರಾಜ್ಯಗಳು ಸುಪ್ರೀಂಕೋರ್ಟ್‍ಗೆ ಬರುತ್ತಿರುವ ಬಗ್ಗೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ. ನೊಟೀಸ್ ಕೊಡಬೇಡಿ ಎಂದು ಕೂಡ ಸುಪ್ರೀಂಕೋರ್ಟ್ ನಲ್ಲಿ ಕೇಳಿಕೊಂಡಿದ್ದಾರೆ. ಎಲ್ಲಿ ಕೇಂದ್ರ ಸರ್ಕಾರಕ್ಕೆ ಮುಜುಗರ ಆಗುತ್ತೋ ಎನ್ನುವ ಆತಂಕವಿದೆ ಹಾಗಾಗೀ ನೊಟೀಸ್ ಕೊಡಬೇಡಿ ಎಂದು ಹೇಳಿದ್ದಾರೆ.
ಕಳೆದ ಸೆಪ್ಟೆಂಬರ್‌ನಲ್ಲಿ ನಾವು ಬರ ಪರಿಹಾರಕ್ಕೆ ಮನವಿ ಮಾಡಿದ್ದೇವೆ. ಅಕ್ಟೋಬರ್‍ನಲ್ಲಿ ಕೇಂದ್ರದ ಅಧ್ಯಯನ ತಂಡ ಬಂದು ಹೋಗಿದೆ. ನವೆಂಬರ್‌ನಲ್ಲಿ ಪರಿಹಾರ ಬಿಡುಗಡೆಯಾಗಬೇಕಿತ್ತು. ಪರಿಹಾರ ಕೋರಿ ಪ್ರಧಾನಿ ನರೇಂದ್ರ ಮೋದಿ ಆದಿಯಾಗಿ ಎಲ್ಲರನ್ನೂ ಭೇಟಿಯಾದರೂ ಪರಿಹಾರ ಬಿಡುಗಡೆ ಮಾಡಿಲ್ಲ. ಮನವಿ ಮಾಡಿದ ಒಂದು ತಿಂಗಳಲ್ಲಿ ಪರಿಹಾರ ನೀಡಬೇಕು. ಮಾರ್ಚ್ ಬಂದರೂ ಇನ್ನೂ ಬಿಡುಗಡೆ ಮಾಡಿಲ್ಲ ಎಂದ ಆರೋಪಿಸಿದರು.
ಮಾರ್ಚ್ 23 ರಂದು ನಾವು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಗೊತ್ತಾದ ಮೇಲೆ ಮಾರ್ಚ್ 28 ರಂದು ಅರ್ಜಿ ಸಲ್ಲಿಸಿದೆ. ಪ್ರಕೃತಿ ವಿಕೋಪಗಳಿಗೆ ಪರಿಹಾರ ನೀಡಲು ಯಾವುದೇ ನಿಯಮ ಅಡ್ಡಿ ಬರಲ್ಲ. ಪರಿಹಾರ ನೀಡದೆ ಕೇಂದ್ರ ನುಣಿಕೊಳ್ಳುತ್ತಿದೆ. ಕೇಂದ್ರ ಪರಿಹಾರ ನೀಡಿದರೆ ಸುಮಾರು 14 ಸಾವಿರ ಕೊಡಬಹುದು. ಹೀಗಾಗಿ ನಾವು ಬಾಯಿ ಮುಚ್ಚಿ ಕೂರಲ್ಲ, ಹೋರಾಟ ಮಾಡುತ್ತೇವೆ ಎಂದರು. ಇದನ್ನೂ ಓದಿ: 5,8,9ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ