ಚಾಮರಾಜನಗರ: ಗಡಿಭಾಗಗಳಲ್ಲಿ ನಿಫಾ ಕಾಣಿಸಿಕೊಳ್ಳುವ ಶಂಕೆ ಬಂದಿದ್ದು, ಈ ಹಿನ್ನೆಲೆ ಮುನ್ನೆಚ್ಚರಿಕೆ ವಹಿಸೋಣ, ಸೋಂಕು ತಡೆಯೋಣ ನಾಣ್ಣುಡಿಯೊಂದಿದೆ ಗಡಿಭಾಗದ ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ.
Advertisement
ಕೊರೊನಾ ಮುನ್ನೆಚ್ಚರಿಕೆಯ ಕ್ರಮವಾಗಿ ಮೂಲೆ ಹೊಳೆ ಚೆಕ್ ಪೋಸ್ಟ್ ಗೆ ಡಿಎಚ್‍ಒ ಡಾ.ವಿಶ್ವೇಶ್ವರಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಮಾತನಾಡಿದ ಅವರು, ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸೋಣ ಮತ್ತು ಸೋಂಕು ತಡೆಯೋಣ ಎಂಬ ನಾಣ್ಣುಡಿಯೊಂದಿಗೆ ಜಾಗೃತಿ ಅಭಿಯಾನ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಊಸರವಳ್ಳಿಯಂತೆ ಬಣ್ಣ ಬದಲಾಗುವ ಚರ್ಮ ಮನುಷ್ಯನಿಗೂ ಬಂತು
Advertisement
ಕೇರಳದಲ್ಲಿ ನಿಫಾ ವೈರಸ್ ಹಿನ್ನೆಲೆಯಲ್ಲಿ ಚಾಮರಾಜನಗರ ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗಡಿಯಂಚಿನಲ್ಲಿರುವ ಮೂಲೆ ಹೊಳೆ ಚೆಕ್ ಪೋಸ್ಟ್ ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಏಕೈಕ ಸ್ವರ್ಣ ಗೌರಿ ದೇವಾಲಯದಲ್ಲಿಲ್ಲ ಪೂಜೆ, ಪುನಸ್ಕಾರ
Advertisement
ವಿಶ್ವೇಶ್ವರಯ್ಯ ಅವರು ವಾಹನ ಚಾಲಕರು ಹಾಗೂ ಪ್ರಯಾಣಿಕರನ್ನು ಖುದ್ದು ತಪಾಸಣೆ ನಡೆಸಿದ್ದಾರೆ. ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಕೊರೊನಾ ಸಂಬಂಧ ಆರ್‍ಟಿಪಿಸಿಆರ್ ಟೆಸ್ಟ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಪ್ರವೇಶ ನೀಡಬೇಕು. ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು ಎಂದು ಚೆಕ್ ಪೋಸ್ಟ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ
Advertisement
ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಪ್ರತಿಯೊಬ್ಬರ ಮೇಲೂ ಹದ್ದಿನ ಕಣ್ಣಿಡಲಾಗಿದೆ. ಗಡಿಯಂಚಿನ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಜನರಲ್ಲಿ ರೋಗ ಲಕ್ಷಣ ಕಂಡು ಬಂದರೆ ತಕ್ಷಣ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಪ್ರಾಣಿಗಳು ಕಚ್ಚಿ ತಿಂದಿರುವ ಹಣ್ಣನ್ನು ಯಾರು ತಿನ್ನಬಾರದು. ಸಿಪ್ಪೆ ತೆಗೆದು ಚೆನ್ನಾಗಿ ತೊಳೆದು ತಿನ್ನಬೇಕು. ಬಾವಲಿಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಜನರು ನೀರನ್ನು ಕಾಯಿಸಿ ಕುಡಿಯಬೇಕು ಎಂದು ಜನರಿಗೆ ಮತ್ತು ಸಿಬ್ಬಂದಿಗೆ ಸೂಚನೆ ಕೊಟ್ಟಿದ್ದಾರೆ.