ಬೆಂಗಳೂರು: ಸಮಾಜ ಮತ್ತು ದೇಶದಲ್ಲಿ ನೈತಿಕತೆಯನ್ನು ಹುಟ್ಟುಹಾಕುವ ಮತ್ತು ಆಧುನಿಕ ಜ್ಞಾನವನ್ನು ಮೌಲ್ಯಗಳೊಂದಿಗೆ ಜೋಡಿಸುವ, ಧರ್ಮ-ಸಂಸ್ಕೃತಿ, ರಾಷ್ಟ್ರದ ಏಕತೆ-ಸಮಗ್ರತೆ ಕಾಪಾಡುವ ಮತ್ತು ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಂತಹ ಶಿಕ್ಷಣದ ಅವಶ್ಯಕತೆ ಇದೆ ಎಂದು ಕರ್ನಾಟಕದ(Karnataka) ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಅಭಿಪ್ರಾಯಪಟ್ಟರು.
ರಾಜಸ್ಥಾನ(Rajasthan) ಯುವ ಸಂಘ, ಶೈಕ್ಷಣಿಕ ಮತ್ತು ಸಾರ್ವಜನಿಕ ಸೇವಾ ಟ್ರಸ್ಟ್, ಬೆಂಗಳೂರು ವತಿಯಿಂದ ನಗರದಲ್ಲಿ ಆಯೋಜಿಸಿದ್ದ 48ನೇ ವಾರ್ಷಿಕ ಪುಸ್ತಕ ಬ್ಯಾಂಕ್ ಮತ್ತು ವಿದ್ಯಾರ್ಥಿವೇತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ರೋಹಿತ್‍ರನ್ನು ನೋಡಲೆಂದು ಮೈದಾನಕ್ಕಿಳಿದ ಅಭಿಮಾನಿಗೆ 6.5 ಲಕ್ಷ ರೂ. ಫೈನ್
Advertisement
ಭಾರತೀಯ ಸಂಸ್ಕೃತಿಯಲ್ಲಿ, ಮಾನವ, ಸಸ್ಯ, ಜಲಚರ ಪರಿಸರ ಇತ್ಯಾದಿಗಳನ್ನು ಗೌರವಿಸುವ ಮತ್ತು ಸಂರಕ್ಷಿಸುವ ಪ್ರಾಚೀನ ಸಂಪ್ರದಾಯವನ್ನು ನಾವು ಹೊಂದಿದ್ದೇವೆ. ಪ್ರಸ್ತುತ ಪರಿಸರ ಸಂರಕ್ಷಣೆಗೆ ಶ್ರಮಿಸಬೇಕಾದ ತುರ್ತು ಅಗತ್ಯವಿದೆ. ಪರಿಸರ ಸಂರಕ್ಷಣೆಯ ದಿಕ್ಕಿನಲ್ಲಿ ಸಕಾರಾತ್ಮಕ ಕೆಲಸವನ್ನು ಪ್ರತಿಜ್ಞೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.
Advertisement
Advertisement
ನಮ್ಮ ಭಾರತೀಯ ಶಿಕ್ಷಣ ವ್ಯವಸ್ಥೆಯು ಪ್ರಾಚೀನ ಕಾಲದಿಂದಲೂ ʼವಸುಧೈವ ಕುಟುಂಬಕಂʼ ತತ್ವಶಾಸ್ತ್ರದ ಮೇಲೆ ಕೇಂದ್ರೀಕೃತವಾಗಿದೆ. ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಮೂಲ ಮಂತ್ರವನ್ನು ಗಮನದಲ್ಲಿಟ್ಟುಕೊಂಡು ನಾವೆಲ್ಲರೂ ಸಮಾಜ ಸೇವೆಗೆ ಕೊಡುಗೆ ನೀಡೋಣ ಎಂದರು.
Advertisement
ರಾಜಸ್ಥಾನ ಯುವ ಸಂಘ, ಬೆಂಗಳೂರು ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಸ್ವಯಂ ಉದ್ಯೋಗದ ಜೊತೆಗೆ, ಡಿಜಿಟಲ್ ತಂತ್ರಜ್ಞಾನವು ಗಣನೀಯವಾಗಿ ಕೊಡುಗೆ ನೀಡುತ್ತಿರುವುದು ಶ್ಲಾಘನೀಯವಾದದ್ದು. ಅಲ್ಲದೇ ಸಮಾಜದಲ್ಲಿ ಉತ್ತಮ ಕೆಲಸ ಮಾಡುವವರನ್ನು ಪ್ರೋತ್ಸಾಹಿಸಿ ಗೌರವಿಸುವ ಕೆಲಸವೂ ಟ್ರಸ್ಟ್ ಮೂಲಕ ನಡೆಸುತ್ತಿರುವುದು ಪ್ರಶಂಸನೀಯವಾದದ್ದು ಎಂದು ತಿಳಿಸಿದರು.
ದೇಶದಲ್ಲಿ ಅಹಿಂಸೆ ಮತ್ತು ಸೇವೆಯ ಕಾರ್ಯದಲ್ಲಿ ಮುನ್ನಡೆಯಬೇಕು, ಇದರಿಂದ ಮಾನವೀಯ, ಸದ್ಗುಣ, ಉತ್ತಮ ಚಿಂತನೆಗಳು ಮತ್ತು ಪರೋಪಕಾರಿ ಶಿಕ್ಷಣದ ಜೊತೆಗೆ ಧರ್ಮ, ಸಂಸ್ಕೃತಿ, ಸಂಸ್ಕಾರಗಳ ಜ್ಞಾನವೂ ಬರಲಿದೆ ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಲೆಹರ್ ಸಿಂಗ್ ಸಿರೋಯಾ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ್ ಕುಮಾರ್ ಗುಪ್ತಾ, ಸಂಸ್ಥೆಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಮನೋಹರ ಛಟ್ಲಾನಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.