ನವದೆಹಲಿ: ಇಂಡಿಯಾ (INDIA) ಮೈತ್ರಿಕೂಟದ ಪ್ರಮುಖ ಸಭೆ ಇಂದು(ಜೂ.8) ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಈ ಮಹತ್ವದ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ(Sonia Gandhi) ಮತ್ತು ಮಮತಾ ಬ್ಯಾನರ್ಜಿ(Mamata Banerjee) ಸೇರಿದಂತೆ 23 ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದರು.
ದೇಶದ ಪ್ರಸ್ತುತ ರಾಜಕೀಯ ಪರಿಸ್ಥಿತಿ ಮತ್ತು ಜನರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಈ ಸಭೆಯನ್ನು ಕರೆಯಲಾಗಿತ್ತು ಸಭೆಯಲ್ಲಿ ಮೈತ್ರಿಕೂಟದ ನಾಯಕರು ಒಮ್ಮತದಿಂದ ಐದು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ:
ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ಚುನಾವಣಾ ಅಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ (CJI) ಪತ್ರ ಬರೆಯಲು ನಿರ್ಧರಿಸಲಾಯಿತು.
ನೀಟ್ (NEET) ಮತ್ತು ಸಿಬಿಎಸ್‌ಇ (CBSE) ಪರೀಕ್ಷೆಗಳಲ್ಲಿನ ಗೊಂದಲಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವರ ತಕ್ಷಣದ ರಾಜೀನಾಮೆಗೆ ಒತ್ತಾಯಿಸಲಾಯಿತು. ಇದನ್ನೂ ಓದಿ: 40 ಪ್ರಕರಣಗಳಲ್ಲಿ ಬೇಕಾಗಿದ್ದ ಸುಪಾರಿ ಕಿಲ್ಲರ್ ಎನ್‌ಕೌಂಟರ್‌ಗೆ ಬಲಿ
ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಸರ್ಕಾರದ ವಿರುದ್ಧ ಹೋರಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
INDIA की बैठक में मेरे शुरुआती वक्तव्य का अंश —
मैं INDIA समूह के नेताओं की इस बैठक में आप सभी का स्वागत करता हूं। यह समूह लगभग ठीक तीन साल पहले अस्तित्व में आया था। मैं ज्यादा नहीं बोलना चाहता, क्योंकि हमारे सामने मौजूद मुद्दे आप सभी अच्छी तरह जानते हैं।हमने 17 अप्रैल, 2026 को… pic.twitter.com/sgUB7UjDUg
— Mallikarjun Kharge (@kharge) June 8, 2026
ಮೈತ್ರಿಕೂಟವನ್ನು ಬಲಪಡಿಸಲು ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ಸೇರಲು ನಿರ್ಧರಿಸಲಾಗಿದ್ದು, ಮುಂದಿನ ಸಭೆಯನ್ನು ಆಗಸ್ಟ್ 8 ರಂದು ಹೈದರಾಬಾದ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಮೈತ್ರಿಕೂಟಕ್ಕೆ ಕೇವಲ ಚುನಾವಣಾ ಮೈತ್ರಿಯ ರೂಪ ನೀಡುವ ಬದಲಾಗಿ, ಅದನ್ನು ಜನರ ಹೋರಾಟವನ್ನಾಗಿ ಮಾಡಲು ‘ಇಂಡಿಯಾ ಜನಬಂಧನ್’ ಎಂಬ ಹೆಸರಿನಲ್ಲಿ ಮುಂದುವರಿಯಲು ತೀರ್ಮಾನಿಸಲಾಗಿದೆ. ಸಂಸತ್ತಿನ ಒಳಗೆ ದಿನನಿತ್ಯದ ಸಮನ್ವಯ ಸಮಿತಿ ಸಭೆಗಳು ಮತ್ತು ಸಂಸತ್ತಿನ ಹೊರಗೆ ಪ್ರತಿ ಎರಡು ತಿಂಗಳಿಗೊಮ್ಮೆ ದೇಶದ ವಿವಿಧ ಭಾಗಗಳಲ್ಲಿ ಬೃಹತ್ ಸಭೆಗಳನ್ನು ನಡೆಸಿ ಜನರನ್ನು ತಲುಪಲು ಯೋಜನೆ ರೂಪಿಸಲಾಗಿದೆ. ಇದನ್ನೂ ಓದಿ: INDIA ಸಭೆಯಲ್ಲಿರುವ ದೀದಿಗೆ ಶಾಕ್ – 20 ಟಿಎಂಸಿ ಸಂಸದರು ಎನ್ಡಿಎಗೆ!
ಭಾಗಿಯಾದವರು ಯಾರು?
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಸಭೆಯ ನೇತೃತ್ವ ವಹಿಸಿದ್ದರು. ಮಮತಾ ಬ್ಯಾನರ್ಜಿ (ಟಿಎಂಸಿ), ಅಖಿಲೇಶ್ ಯಾದವ್ (ಸಮಾಜವಾದಿ ಪಕ್ಷ), ತೇಜಸ್ವಿ ಯಾದವ್ (ಆರ್‌ಜೆಡಿ), ಶರದ್ ಪವಾರ್ ಬಣದ ಸುಪ್ರಿಯಾ ಸುಳೆ(ಎನ್‌ಸಿಪಿ), ಒಮರ್ ಅಬ್ದುಲ್ಲಾ (ನ್ಯಾಷನಲ್ ಕಾನ್ಫರೆನ್ಸ್), ಮೆಹಬೂಬಾ ಮುಫ್ತಿ (ಪಿಡಿಪಿ) ಮತ್ತು ಎಡಪಕ್ಷಗಳ ನಾಯಕರು ಭಾಗವಹಿಸಿದ್ದರು.
