ನವದೆಹಲಿ: ಆಗಸ್ಟ್ 1 ರಂದು ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೋರಿದ ಅನುಮತಿಯನ್ನು ದೆಹಲಿ ಲೆಫ್ಟಿನೆಂಟ್ ಗವರ್ನರ್(ಎಲ್‌ಜಿ) ವಿ.ಕೆ ಸಕ್ಸೇನಾ ಗುರುವಾರ ತಿರಸ್ಕರಿಸಿದ್ದಾರೆ.
ಸಿಂಗಾಪುರದಲ್ಲಿ ನಡೆಯಲಿರುವ ಶೃಂಗಸಭೆ ಮೇಯರ್‌ಗಳಿಗೆ ಮೀಸಲಾಗಿದ್ದು, ಆ ಕಾರ್ಯಕ್ರಮದಲ್ಲಿ ಸಿಎಂ ಹಾಜರಾಗುವುದು ಸರಿಯಲ್ಲ ಎಂದು ಸಕ್ಸೇನಾ ಹೇಳಿದ್ದಾರೆ.
- Advertisement
ಲೆಫ್ಟಿನೆಂಟ್ ಗವರ್ನರ್ ಶೃಂಗಸಭೆಯ ಭೇಟಿಗೆ ಅನುಮತಿ ನೀಡದಿದ್ದರೂ ಕೇಜ್ರಿವಾಲ್ ಸಿಂಗಾಪುರಕ್ಕೆ ಭೇಟಿ ನೀಡುವುದಾಗಿ ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಕೈ ಕೊಟ್ಟ ಮೋದಿ ಪ್ಲಾನ್ – ಕಾಡುಗಳ್ಳರ ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ತಳಿಯ ಶ್ವಾನ
- Advertisement
ಅನುಮತಿ ನಿರಾಕರಣೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ನಮ್ಮ ದೇಶದ ಪ್ರತಿಯೊಂದು ಸಾಂವಿಧಾನಿಕ ಪ್ರಾಧಿಕಾರದ ಭೇಟಿಯನ್ನು ಆ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರುವ ವಿಷಯಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ನಿಮ್ಮ ಮಾತಿನಂತೆ ನಡೆಯುವುದಾದರೆ, ಪ್ರಧಾನಿ ನರೇಂದ್ರ ಮೋದಿಯವರು ಯಾವುದೇ ವಿದೇಶಿ ಭೇಟಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿರಲಿಲ್ಲ. ಅವರು ಹೆಚ್ಚಿನ ಭೇಟಿಗಳಲ್ಲಿ ರಾಜ್ಯದ ಪಟ್ಟಿಯಲ್ಲಿ ಹಾಗೂ ಅಧಿಕಾರದ ವ್ಯಾಪ್ತಿಯಲ್ಲಿ ಬಾರದ ವಿಷಯಗಳನ್ನೇ ಚರ್ಚಿಸುತ್ತಾರೆ ಎಂದಿದ್ದಾರೆ.
ಕೇಜ್ರಿವಾಲ್ ಅವರನ್ನು ಜೂನ್‌ನಲ್ಲಿ ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಶೃಂಗಸಭೆಗೆ ಆಹ್ವಾನಿಸಿದ್ದರು. ಈ ಬಗ್ಗೆ ಕಳೆದ ವಾರ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಸಿಂಗಾಪುರ ಭೇಟಿಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಮೋದಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ
ಕೇಂದ್ರ ತನಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅನುಮತಿ ನೀಡದೇ ಹೋದಾಗ ಕೇಜ್ರಿವಾಲ್ ಅಸಮಾಧಾನ ವ್ಯಕ್ತಪಡಿಸಿ, ನಾನು ಅಪರಾಧಿಯಲ್ಲ, ದೆಹಲಿಯ ಚುನಾಯಿತ ಮುಖ್ಯಮಂತ್ರಿ. ಸಿಂಗಾಪುರದಲ್ಲಿ ನಡೆಯುತ್ತಿರುವ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸುವುದು ಹೆಮ್ಮೆಯ ವಿಚಾರ. ಆದರೆ ಕೇಂದ್ರ ನನಗೆ ಭೇಟಿಗೆ ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದರು.