ಡೆಹ್ರಾಡೂನ್: ಬಾಬಾ ರಾಮ್‌ದೇವ್ (Baba Ramdev) ಅವರ ದಿವ್ಯ ಫಾರ್ಮಸಿ ಮತ್ತು ಪತಂಜಲಿ (Patanjali) ಆಯುರ್ವೇದ್ ಲಿಮಿಟೆಡ್ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿರುವುದಾಗಿ ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಔಷಧ ಜಾಹೀರಾತು ಕಾನೂನನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಅವರ 14 ಉತ್ಪನ್ನಗಳ ಉತ್ಪಾದನಾ ಪರವಾನಗಿಯನ್ನು ರದ್ದುಗೊಳಿಸಿದೆ.
ಕಾನೂನಿಗೆ ವಿರುದ್ಧವಾದ ಜಾಹೀರಾತುಗಳನ್ನು ಪ್ರಕಟಿಸಿದರೆ ದಂಡ, ಜೈಲು ಶಿಕ್ಷೆ ಅಥವಾ ಎರಡನ್ನೂ ಒಳಗೊಂಡಂತೆ ಕಠಿಣ ಶಿಸ್ತು ಮತ್ತು ಕಾನೂನು ಕ್ರಮಗಳನ್ನು ರಾಜ್ಯ ಪರವಾನಗಿ ಪ್ರಾಧಿಕಾರವು (ಎಸ್‌ಎಲ್‌ಎ) ತೆಗೆದುಕೊಳ್ಳುತ್ತದೆ ಎಂದು ಉತ್ತರಾಖಂಡ ಸರ್ಕಾರವು ಅಫಿಡವಿಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ
ಎಸ್‌ಎಲ್‌ಎ ಏ.15 ರಂದು ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ಆದೇಶ ಹೊರಡಿಸಿದ್ದು, ಅದರಲ್ಲಿ ಅವರ 14 ಉತ್ಪನ್ನಗಳಾದ ಸ್ವಸರಿ ಗೋಲ್ಡ್, ಸ್ವಸರಿ ವಟಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಳೇಹ್, ಮುಕ್ತಾವತಿ ಎಕ್ಸ್‌ಟ್ರಾ ಪವರ್, ಲಿಪಿಡೋಮ್, ಬಿಪಿ ಗ್ರಿಟ್, ಮಧುಗ್ರಿತ್, ಮಧುನಾಶಿನಿವತಿ ಎಕ್ಸ್‌ಟ್ರಾ ಪವರ್, ಲಿವಾಮೃತ್ ಅಡ್ವಾನ್ಸ್, ಲಿವೋಗ್ರಿಟ್, ಐಗ್ರಿಟ್ ಗೋಲ್ಡ್ ಮತ್ತು ಪತಂಜಲಿ ದೃಷ್ಟಿ ಐ ಡ್ರಾಪ್ ಅನ್ನು ದಿ ಡ್ರಗ್ಸ್ ಅಂಡ್ ಕಾಸ್ಮೆಟಿಕ್ಸ್ ರೂಲ್ಸ್, 1945 ರ ನಿಯಮ 159 (1) ರ ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪರವಾನಗಿ ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.
ದಿವ್ಯ ಫಾರ್ಮಸಿ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್ ವಿರುದ್ಧ ಕಾನೂನಿನಲ್ಲಿ ಸೂಚಿಸಲಾದ ಕಾರ್ಯವಿಧಾನ ಮತ್ತು ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುವುದಾಗಿ SLA ಹೇಳಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆ; ಕೊಚ್ಚಿ ಹೋದ ಮನೆಗಳು, ರಸ್ತೆಗಳಿಗೂ ಹಾನಿ