ಮುಂಬೈ: ನಿಯಮ ಉಲ್ಲಂಘನೆ ಮಾಡಿರುವ ಆರು ಕೆಮ್ಮಿನ ಸಿರಪ್ (Cough Syrup) ತಯಾರಕ ಕಂಪನಿಗಳ ಪರವಾನಗಿ ಅಮಾನತುಗೊಳಿಸಲಾಗಿದೆ ಎಂದು ಮಹಾರಾಷ್ಟ್ರ (Maharashtra) ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ.
ಬಿಜೆಪಿ ಶಾಸಕ ಆಶಿಕ್ ಶೇಲಾರ್ ಹಾಗೂ ಇತರರ ನೊಟೀಸ್‍ಗೆ ಉತ್ತರಿಸಿದ ಆಹಾರ ಮತ್ತು ಔಷಧ ಆಡಳಿತ (Food and Drugs Administration Minister) ಸಚಿವ ಸಂಜಯ್ ರಾಥೋಡ್ (Sanjay Rathod) ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ. ಉತ್ತರ ಪ್ರದೇಶದ ನೋಯ್ಡಾ ಮೂಲದ ಸಂಸ್ಥೆ ತಯಾರಿಸಿದ್ದ ಕೆಮ್ಮಿನ ಸಿರಪ್‍ನಿಂದ ಕಳೆದ ವರ್ಷ ಉಜ್ಬೇಕಿಸ್ತಾನದ (Uzbekistan) 18 ಮಕ್ಕಳು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಮೂರು ಸಿಬ್ಬಂದಿಯನ್ನು ಬಂಧಿಸಲಾಗಿತ್ತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮಾಡಾಳ್ ಕುಟುಂಬದಿಂದ ಖತರ್ನಾಕ್ ಪ್ಲಾನ್- ಲೋಕಾಯುಕ್ತ ಬರುತ್ತೆ ಅಂತ ಸಿಸಿಟಿವಿ ಆಫ್!
Advertisement
Advertisement
ಸರ್ಕಾರವು 1ಂ8 ಕೆಮ್ಮಿನ ಸಿರಪ್ ತಯಾರಿಕಾ ಕಂಪನಿಗಳಲ್ಲಿ 84 ಕಂಪನಿಗಳ ತನಿಖೆ ಆರಂಭಿಸಿದೆ. ನಿಯಮ ಉಲ್ಲಂಘಿಸಿರುವ 17 ಸಂಸ್ಥೆಗಳಿಗೆ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದಿದ್ದಾರೆ.
Advertisement
ಭಾರತದಿಂದ ರಫ್ತಾಗಿದ್ದ ಕೆಮ್ಮಿನ ಸಿರಪ್‍ನಿಂದಾಗಿ ಗ್ಯಾಂಬಿಯಾದ (Gambia) 66 ಮಕ್ಕಳು ಮೃತಪಟ್ಟಿದ್ದರು ಎಂದು ಅವರು ನೆನಪಿಸಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ನಿಯಮ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಕಂಪನಿ ಹರಿಯಾಣ ಮೂಲದ್ದಾಗಿದ್ದು ರಾಜ್ಯದಲ್ಲಿ ಯಾವುದೇ ಉತ್ಪಾದನಾ ಘಟಕ ಹೊಂದಿಲ್ಲ ಎಂದಿದ್ದಾರೆ.
Advertisement
ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದೇವೆ. ಬೇರೆ ರಾಜ್ಯಗಳಿಗೆ ಔಷಧಗಳನ್ನು ರಫ್ತು ಮಾಡುವಾಗ ವಿಶ್ವ ಆರೋಗ್ಯ ಸಂಸ್ಥೆಯ ಜಿಎಂಪಿ ನಿಯಮವನ್ನು ಅನುಸರಿಸುತ್ತಿದ್ದೇವೆ. ರಾಜ್ಯದ 996 ಅಲೋಪತಿ ಔಷಧ ತಯಾರಿಕ ಘಟಕದಿಂದ 514 ಉತ್ಪನ್ನಗಳು ರಫ್ತಾಗುತ್ತಿವೆ ಎಂದು ಹೇಳಿದ್ದಾರೆ.
20% ಕಂಪನಿಗಳು ಸಿರಪ್ ತಯಾರಿಕಾ ನಿಯಮ ಉಲ್ಲಂಘಿಸಿ ದಾಳಿಗಳನ್ನು ಎದುರಿಸುತ್ತಿವೆ. ಜನರ ಜೀವದ ಜೊತೆ ಚೆಲ್ಲಾಟ ಆಡುವವರನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಎಂದು ಶಾಸಕ ಸಂಜಯ್ ಶಿರ್ಸತ್ (Sanjay Shirsat) ಹೇಳಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮತ್ತೆ ಮೋದಿ ವಿರೋಧಿ ಬರಹ – 2 ತಿಂಗಳಲ್ಲಿ 4ನೇ ಘಟನೆ