ಮುಂಬೈ: ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಯರವಾಡ ತೆರೆದ ಜೈಲಿನಲ್ಲಿರುವ ಬ್ಯಾರಕ್‍ನಲ್ಲಿ ನಡೆದಿದೆ.
ಗಣೇಶ್ ತಾಂಬೆ (53) ಆತ್ಮಹತ್ಯೆಗೆ ಶರಣಾದ ಕೈದಿ. 2010ರಲ್ಲಿ ವಿರಾರ್‌ನಲ್ಲಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ 2011ರಲ್ಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದನ್ನೂ ಓದಿ: Galwan Clash ಚೀನಾದ ಸುಳ್ಳು ಬಯಲು – 38 ಪಿಎಲ್‌ಎ ಯೋಧರು ಸಾವು – ಭಾರತದ ಸೇನೆಗೆ ಹೆದರಿ ಪರಾರಿಯಾದ ಚೀನಿ ಸೈನಿಕರು
ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಡುಗೆ ಮನೆಯಲ್ಲಿ ಕೆಲಸ ಮುಗಿಸಿದ್ದ ತಾಂಬೆ ಬ್ಯಾರಕ್‍ನೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಇತರೆ ಜೈಲು ಕೈದಿಗಳು ಆತನ ಶವವನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾಲಕಿಯ ತಲೆ ಕಡಿದು ರುಂಡದೊಂದಿಗೆ ಊರಿಡೀ ಸುತ್ತಿದ
ಉಪ ಪೊಲೀಸ್ ಆಯುಕ್ತ ರೋಹಿದಾಸ್ ಪವಾರ್ ಮಾತನಾಡಿ, ಕೈದಿ ಗುರುವಾರ ಮಧ್ಯಾಹ್ನ ಯರವಾಡ ಜೈಲಿನ ಬ್ಯಾರಕ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪ್ರಾಥಮಿಕ ತನಿಖೆಯು ಆತ್ಮಹತ್ಯೆಯನ್ನು ಸೂಚಿಸುತ್ತದೆ. ಆತ್ಮಹತ್ಯೆಗೆ ಕಾರಣ ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.