ಶಿವಮೊಗ್ಗ: ಕೊಲೆಗೈದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗ (Shivamogga) ನ್ಯಾಯಾಲಯ (Court) ತೀರ್ಪು ನೀಡಿದೆ.
ಶಿವಮೊಗ್ಗದ ಶರಾವತಿ ನಗರದಲ್ಲಿ 2018ರಲ್ಲಿ ಜಮೀನಿನ ವಿಷಯಕ್ಕೆ ಸಂಬಂಧಿಸಿದಂತೆ ರೇವಣ್ಣಪ್ಪ (51) ಎಂಬ ವ್ಯಕ್ತಿಯ ಕೊಲೆಯಾಗಿತ್ತು. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳಲೂರಿನ ನಿವಾಸಿ ಪ್ರಕಾಶ್ (45) ಎಂಬವನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಜಲ್ಲಿಕಟ್ಟುಗೆ ಸುಪ್ರೀಂ ಅನುಮತಿ – ಕಂಬಳಕ್ಕೂ ಗ್ರೀನ್ ಸಿಗ್ನಲ್
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿ ಪ್ರಕಾಶ್‌ಗೆ ಜೀವಾವಧಿ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದೆ. ಒಂದು ವೇಳೆ ದಂಡದ ಮೊತ್ತ ಕಟ್ಟಲು ವಿಫಲವಾದರೆ ಎರಡು ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸುವಂತೆ ಕೋರ್ಟ್ ತೀರ್ಪು ನೀಡಿದೆ. ಇದನ್ನೂ ಓದಿ: ಕಪ್ಪು ಸುಂದರಿಯ ಮೇಲೆ ಮುತ್ತಪ್ಪ ರೈ ಪುತ್ರನ ಕಣ್ಣು – ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ