ಲಕ್ನೋ: ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಿಗೆ ಜೀವ ಬೆದರಿಕೆ ಕರೆ (Threat Call) ಬಂದಿದೆ. ಟೋಲ್ ಫ್ರೀ ಸಂಖ್ಯೆ 112ಕ್ಕೆ ಸಂದೇಶ ಕಳುಹಿಸಿ ಕೊಲೆ ಬೆದರಿಕೆ ಹಾಕಲಾಗಿದೆ.
ಉತ್ತರ ಪ್ರದೇಶದ 112 ವಾಟ್ಸಾಪ್ ಗ್ರೂಪ್‌ನಲ್ಲಿ ಜೀವ ಬೆದರಿಕೆಯ ಸಂದೇಶ ರವಾನೆಯಾಗಿದ್ದು, ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಸಂದೇಶದಲ್ಲಿ ಆರೋಪಿ ಮುಖ್ಯಮಂತ್ರಿ ಯೋಗಿಯನ್ನು ಕೊಲ್ಲುವುದಾಗಿ ಬರೆದಿದ್ದಾನೆ. ಸಂದೇಶವನ್ನು ಸ್ವೀಕರಿಸಿದ ತಕ್ಷಣ ಪೊಲೀಸರು ಎಡಿಜಿ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಗುಪ್ತಚರ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನನ್ನ ರೋಡ್ ಶೋ ಮುಂದೆ ಬಿಜೆಪಿ, ಕಾಂಗ್ರೆಸ್‌ನದ್ದು ಏನೇನು ಅಲ್ಲ: ಹೆಚ್‌ಡಿಕೆ ವ್ಯಂಗ್ಯ
ಇದೀಗ ಬೆದರಿಕೆ ಹಾಕಿರುವ ವ್ಯಕ್ತಿಯನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಶೀಘ್ರದಲ್ಲೇ ದುಷ್ಕರ್ಮಿಯನ್ನು ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ನಲ್ಲಿ ಭೀಕರ ಸ್ಫೋಟ – 12 ಮಂದಿ ಪೊಲೀಸರ ದಾರುಣ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ