ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ‘ಪುಷ್ಪ 2’ (Pushpa 2) ಸಿನಿಮಾದ ಸಕ್ಸಸ್ ಬೆನ್ನಲ್ಲೇ ಗುಡ್ ನ್ಯೂಸ್ ಕೊಟ್ಟಿದ್ದಾರೆ. ರಶ್ಮಿಕಾರನ್ನು ಗರ್ಲ್‌ಫ್ರೆಂಡ್ ಆಗಿ ಪರಿಚಯಿಸಲು ಮುಹೂರ್ತ ಫಿಕ್ಸ್ ಆಗಿದೆ. ಇದನ್ನೂ ಓದಿ:ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದಲ್ಲಿ ಅನಿಲ್ ಕಪೂರ್?
‘ಪುಷ್ಪ 2’ ಬಳಿಕ ರಶ್ಮಿಕಾ ಮಂದಣ್ಣ ನಟನೆಯ ಮುಂದಿನ ಸಿನಿಮಾ ಅಪ್‌ಡೇಟ್‌ವೊಂದು ಸಿಕ್ಕಿದೆ. ರಶ್ಮಿಕಾ ನಟನೆಯ ‘ದಿ ಗರ್ಲ್‌ಫ್ರೆಂಡ್’ (The Girlfriend) ಸಿನಿಮಾದ ಟೀಸರ್ ರಿಲೀಸ್ ಅನ್ನು ವಿಜಯ್ ದೇವರಕೊಂಡ (Vijay Devarakonda) ಬಿಡುಗಡೆ ಮಾಡಲಿದ್ದಾರೆ. ಡಿ.9ರಂದು ಬೆಳಗ್ಗೆ 11:07ಕ್ಕೆ ಟೀಸರ್ ಅನ್ನು ವಿಜಯ್ ರಿವೀಲ್ ಮಾಡಲಿದ್ದಾರೆ.
View this post on Instagram
ನಿರ್ಮಾಪಕ ಅಲ್ಲು ಅರವಿಂದ್ ಅವರು ‘ದಿ ಗರ್ಲ್‌ಫ್ರೆಂಡ್’ ಚಿತ್ರವನ್ನು ಬಹುಭಾಷೆಗಳಲ್ಲಿ ನಿರ್ಮಾಣ ಮಾಡಲಿದ್ದಾರೆ. ವಿಶೇಷ ಅಂದರೆ ಈ ಚಿತ್ರದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ಪವರ್‌ಫುಲ್ ರೋಲ್‌ನಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.