ಚಾಮರಾಜನಗರ: ಪ್ರೇಮ ವಿಚಾರಕ್ಕೆ ಲೈಟ್ ಬಾಯ್ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ಪ್ರೇಮ ವಿಚಾರಕ್ಕೆ ಜಗಳ ಅತಿರೇಕಕ್ಕೆ ಹೋಗಿದ್ದು, ಹೊಸೂರು ಬಡಾವಣೆಯ ಚಿಕ್ಕರಾಜು(30) ಕೊಲೆಯಾಗಿದ್ದಾನೆ. ಬೆಂಗಳೂರಿನಲ್ಲಿ ಲೈಟ್ ಬಾಯ್ ಆಗಿದ್ದ ಚಿಕ್ಕರಾಜು ಹಬ್ಬಕ್ಕೆ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಇದನ್ನೂ ಓದಿ: ದೃಢಸಂಕಲ್ಪ, ಜಾಣ್ಮೆ, ತಾಳ್ಮೆ ಇವು ಯಶಸ್ಸಿನ ಸೂತ್ರಗಳು: ಆನಂದ್ ಮಹೀಂದ್ರಾ
ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿದ್ದ ಯುವತಿಯನ್ನು ಚಿಕ್ಕರಾಜು ಪ್ರೀತಿ ಮಾಡುತ್ತಿದ್ದ. ಈ ವಿಚಾರ ಯುವತಿಯ ಸಂಬಂಧಿಕರಿಗೆ ತಿಳಿದಿದ್ದು, ಇದನ್ನು ವಿರೋಧಿಸಿ ಚಿಕ್ಕರಾಜುನನ್ನು ಪ್ರಶ್ನಿಸಿದ್ದಾರೆ. ಆದರೆ ಚಿಕ್ಕರಾಜು ಇದನ್ನು ವಿರೋಧಿಸಿದ್ದಾನೆ.
ಪರಿಣಾಮ ವೀರಭದ್ರನಾಯ್ಕ, ಯುವತಿ ತಂದೆ ಮಹದೇವನಾಯ್ಕ, ಸಹೋದರರಾದ ಕಿರಣ್, ಅಭಿಷೇಕ್ ಆತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೃತ್ಯ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಪ್ರಸ್ತುತ ಈ ಪ್ರಕರಣ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ಕೆಲಸ ಮಾಡುತ್ತಿದ್ದ ವೇಳೆ ಮೆಷಿನ್‍ಗೆ ವೇಲ್ ಸಿಲುಕಿ ಯುವತಿ ಸಾವು
ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಶೋಧ ಕಾರ್ಯ ಮಾಡುತ್ತಿದ್ದಾರೆ.