DistrictsKarnatakaLatestLeading NewsMain PostShivamogga
ಇಂದಿನಿಂದ ಆಗುಂಬೆ ಘಾಟಿ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

Advertisements
ಶಿವಮೊಗ್ಗ: ಗುಡ್ಡ ಕುಸಿದು ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಇಂದಿನಿಂದ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ಹೌದು. ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಬಂದ್ ಆಗಿತ್ತು. ರಸ್ತೆಯ ಮೇಲೆ ಗುಡ್ಡ ಕುಸಿದ ಮಣ್ಣು ಹಾಗೂ ಮರಗಳು ಬಿದ್ದಿದ್ದವು. ಇದೀಗ ತೆರವು ಕಾರ್ಯಾಚರಣೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಆಗುಂಬೆ ಘಾಟಿಯ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಇದನ್ನೂ ಓದಿ: ಈದ್ಗಾ ಮೈದಾನ ವಿವಾದ- ಅನುಮತಿ ಇಲ್ಲದ ಬಂದ್‍ಗಾಗಿ 600ಕ್ಕೂ ಹೆಚ್ಚು ಪೊಲೀಸರ ನಿಯೋಜನೆ
ಜು.30 ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ – ಉಡುಪಿ – ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು.