– ವರ್ಗಾವಣೆ, ನೇಮಕಾತಿ, ಯೋಜನೆಗಳ ಜಾರಿಗೆ ಸರ್ಕಾರಕ್ಕೆ ಬೇಕು ಅನುಮತಿ
ನವದೆಹಲಿ: ಲೆಫ್ಟಿನೆಂಟ್ ಗವರ್ನರ್‌ಗೆ (Lt Governor) ಹೆಚ್ಚಿನ ಅಧಿಕಾರವನ್ನು ನೀಡಲು ಗೃಹ ವ್ಯವಹಾರಗಳ ಸಚಿವಾಲಯ ಜಮ್ಮು ಮತ್ತು ಕಾಶ್ಮೀರ (Jammu And Kashmir) ಮರುಸಂಘಟನೆ ಕಾಯ್ದೆಗೆ ತಿದ್ದುಪಡಿ ಮಾಡಿದೆ. ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಕೂಡ ಈಗ ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ನಂತೆ ಆಡಳಿತಾತ್ಮಕ ಅಧಿಕಾರವನ್ನು ಪಡೆಯಲಿದ್ದಾರೆ.
Advertisement
ಹೊಸ ತಿದ್ದುಪಡಿ ಅನ್ವಯ ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅನುಮತಿಯಿಲ್ಲದೆ ವರ್ಗಾವಣೆ, ನೇಮಕಾತಿ ಅಥವಾ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. 2019ರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆಯ ಸೆಕ್ಷನ್ 55ರ ಅಡಿಯಲ್ಲಿ ತಿದ್ದುಪಡಿ ಮಾಡಿದ ನಿಯಮಗಳನ್ನು ಗೃಹ ಇಲಾಖೆ ಸೂಚಿಸಿದೆ. ಇದರಲ್ಲಿ ಎಲ್‌ಜಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಹೊಸ ವಿಭಾಗಗಳನ್ನು ಸೇರಿಸಿದೆ. ಇದನ್ನೂ ಓದಿ: ಆಟೋ ಚಕ್ರದಿಂದ ಮೈಗೆ ಚಿಮ್ಮಿದ ಕೆಸರು – ಮರಳಿ ಬರುವವರೆಗೂ ಕಾದು ಚಾಲಕನಿಗೆ ಚಾಕು ಇರಿತ
Advertisement
Advertisement
ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ ಅಲ್ಲಿ ಚುನಾವಣೆ ನಡೆದಿಲ್ಲ. ಆದರೆ ಕೇಂದ್ರ ಚುನಾವಣಾ ಆಯೋಗ ಯಾವಾಗ ಬೇಕಾದರೂ ಚುನಾವಣೆ ನಡೆಸಬಹುದಾಗಿದ್ದು, ಅಲ್ಲಿ ಸರ್ಕಾರ ರಚನೆಯಾಗಲಿದೆ. ಸರ್ಕಾರ ರಚನೆಗೂ ಮುನ್ನ ಲೆಫ್ಟಿನೆಂಟ್ ಗವರ್ನರ್‌ಗೆ ಚುನಾಯಿತ ಸರ್ಕಾರಕ್ಕಿಂತ ಹೆಚ್ಚಿನ ಅಧಿಕಾರವನ್ನು ಕೇಂದ್ರ ಸರ್ಕಾರ ನೀಡಿದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಭೂಕುಸಿತ – ಚಾರ್‌ಧಾಮ್ ಯಾತ್ರೆಗೆ ತೆರಳಿದ್ದ ಕನ್ನಡಿಗರು ಪಾರು
Advertisement
ಈ ನಿಯಮದಿಂದ ದೆಹಲಿಯಲ್ಲಿ ಆಪ್ ಸರ್ಕಾರ ಮತ್ತು ಲೆಫ್ಟಿನೆಂಟ್ ಗರ್ವನರ್ ನಡುವೆ ಆಗಾಗ ಸಮರ ನಡೆಯುತ್ತಲೇ ಇರುತ್ತದೆ. ಲೆಫ್ಟಿನೆಂಟ್ ಗರ್ವನರ್ ಬದಲು ಜನರಿಂದ ಆಯ್ಕೆಯಾಗಿ ಬಂದ ಸರ್ಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕು. ನೇಮಕಾತಿ, ವರ್ಗಾವಣೆ ಮತ್ತು ಯೋಜನೆಗಳ ಜಾರಿ ವಿಚಾರದಲ್ಲಿ ವಿಧಾನಸಭೆಗೆ ಹೆಚ್ಚು ಮಾನ್ಯತೆ ನೀಡಬೇಕು ಎಂದು ಈಗಾಗಲೇ ಆಪ್ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ಮಾಡುತ್ತಿದೆ. ಇದನ್ನೂ ಓದಿ: 6 ತಿಂಗಳ ಹಿಂದೆ ಮೃತಪಟ್ಟಿದ್ದ ಅಧಿಕಾರಿಗೆ ವರ್ಗಾವಣೆ – ಪೌರಾಡಳಿತ ಇಲಾಖೆ ಯಡವಟ್ಟು