ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ ಅಂತೂ ಮುಹೂರ್ತ ಕೂಡಿಬಂದಿದೆ. ಎಲ್ಲಾ ಅಂದುಕೊಂಡಂತೆ ಆದ್ರೆ ಮಂಗಳವಾರ (ಜು.21) ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬೀಳಲಿದೆ.
ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿಗೆ ಸಿಎಂ ಡಿಕೆ ಶಿವಕುಮಾರ್ (DK Shivakumar), ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ತೆರಳಲಿದ್ದಾರೆ. ಇದನ್ನೂ ಓದಿ: ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

ರಾಹುಲ್ ಗಾಂಧಿ (Rahul Gandhi), ಖರ್ಗೆ ನೇತೃತ್ವದಲ್ಲಿ ಹೈವೋಲ್ಟೇಜ್ ಸಭೆ ನಡೆಯುವ ಸಾಧ್ಯತೆ ಇದ್ದು, ಸಭೆಯಲ್ಲಿ ಸಚಿವರ ಪಟ್ಟಿ ಅಂತಿಮಗೊಳ್ಳಲಿದೆ ಎನ್ನಲಾಗಿದೆ. ಇದನ್ನೂ ಓದಿ: ನನ್ನ ಪತ್ನಿ ಅನ್ನಪೂರ್ಣೆ, ಆಕೆಯನ್ನು ರಂಗನಾಥನ ಪಾದಕ್ಕೆ ಕಳಿಸುತ್ತಿದ್ದೇನೆ – ಮಡದಿ ನೆನೆದು ಕಣ್ಣೀರಿಟ್ಟ ದೊಡ್ಡಗೌಡ್ರು
ಕಳೆದ ಬಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅನುಪಸ್ಥಿತಿಯಲ್ಲಿ ಸಭೆ ಅಪೂರ್ಣವಾಗಿತ್ತು. ಈ ಹಿನ್ನೆಲೆಯಲ್ಲಿ ನಾಳೆ ಮತ್ತೊಮ್ಮೆ ಸಭೆಗೆ ವೇದಿಕೆ ಸಿದ್ಧವಾಗಿದೆ. ಈಗಾಗಲೇ ಪಟ್ಟಿಸಿದ್ದಪಡಿಸಿರುವ ಡಿಕೆಶಿ, ಸಿದ್ದರಾಮಯ್ಯ ನಾಳೆ ಹೈಕಮಾಂಡ್ ಮುಂದೆ ಮಂಡನೆ ಮಾಡಲಿದ್ದಾರೆ. ಪಟ್ಟಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ರೆ, ಗುರುವಾರ ಅಥವಾ ಶನಿವಾರದೊಳಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.
