ಹಾಸನ: ವಿದ್ಯುತ್ ಪರಿವರ್ತಕ ರಿಪೇರಿ ವೇಳೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಸಬ್ಬನಹಳ್ಳಿಯಲ್ಲಿ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.
ಹೆಗ್ಗಡಿಹಳ್ಳಿ ಗ್ರಾಮದ ಮಂಜುನಾಥ್(35) ಮೃತ ಸೆಸ್ಕ್ ನೌಕರ. ಮಂಜುನಾಥ್ ವಿದ್ಯುತ್ ಕಂಬದ ಮೇಲೇರಿ ಟ್ರಾನ್ಸ್‍ಫರಂ ದುರಸ್ತಿ ಮಾಡುತ್ತಿದ್ದ. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಹರಿದು ಕಂಬದ ಮೇಲೆಯೇ ಹಸುನೀಗಿದ್ದಾನೆ. ನಂತರ ಸೆಸ್ಕ್ ಸಿಬ್ಬಂದಿ ಮಂಜುನಾಥ್ ಮೃತದೇಹವನ್ನು ಕಂಬದಿಂದ ಕೆಳಗಿಳಿಸಿದರು. ಇದನ್ನೂ ಓದಿ: ನೀಟ್ ಪರೀಕ್ಷಾ ಹಾಲ್‌ಗೆ ಪ್ರವೇಶಿಸುವ ಮೊದಲು ಬ್ರಾಗಳನ್ನು ತೆಗೆದುಹಾಕಲು ಒತ್ತಾಯ – ತನಿಖೆಗೆ ಆದೇಶ
ಅಧಿಕಾರಿಗಳ ನಿರ್ಲಕ್ಷ್ಯವೇ ಲೈನ್‍ಮನ್ ಸಾವಿಗೆ ಕಾರಣ ಎಂದು ಮೃತನ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಕೆಲಕಾಲ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.
ಮಂಜುನಾಥ್ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ: ಕಾರಜೋಳ ಕಿಡಿ