ಚಿತ್ರದುರ್ಗ: ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರಣ ಆದವರನ್ನು ಶಾಸಕರು ಕಡೆಗಣಿಸುತ್ತಿದ್ದಾರೆ ಎಂದು ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ಖನಿಜ ನಿಗಮ ಅಧ್ಯಕ್ಷ ಲಿಂಗಮೂರ್ತಿ ಗುಡುಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು 2023ಕ್ಕೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಈ ಹಿಂದೆ 2008, 2013ರಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋಲು ಕಂಡಿದ್ದೇನೆ. 2018ರಲ್ಲಿ ಮತ್ತೆ ನನಗೆ ಬಿಜೆಪಿಯಿಂದ ಸ್ಪರ್ಧಿಸುವ ಅವಕಾಶವಿದ್ದರೂ, ಕ್ಷೇತ್ರದಲ್ಲಿ ಕಾಂಗ್ರೆಸ್‍ನ್ನು ಸೋಲಿಸಬೇಕು ಹಾಗೂ ಬಿಎಸ್‍ವೈ ಸಿಎಂ ಆಗಬೇಕೆಂಬ ದೃಷ್ಟಿಯಿಂದ ಶಾಸಕ ಗೂಳಿಹಟ್ಟಿ ಶೇಖರ್ ಅವರಿಗೆ ಬಿಜೆಪಿ ಟಿಕೆಟ್ ತ್ಯಾಗ ಮಾಡಿದ್ದೆನು ಎಂದರು.
Advertisement
Advertisement
ಚುನಾವಣೆಯಲ್ಲಿ ಗೂಳಿಹಟ್ಟಿ ಶೇಖರ್ ಅವರು ಅಭ್ಯರ್ಥಿಯಾದರೂ, ನಾನೇ ಅಭ್ಯರ್ಥಿ ಎಂಬಂತೆ ನಾನು ಹಾಗೂ ನನ್ನ ಕಾರ್ಯಕರ್ತರು ಕೆಲಸ ಮಾಡಿ ಬಿಜೆಪಿ ಗೆಲ್ಲಿಸಿದ್ದೆವು. ಆದರೆ ನಮ್ಮ ಬೆಂಬಲದಿಂದ ಗೆದ್ದ ಬಳಿಕ ಶಾಸಕರು ನಮ್ಮನ್ನು ಕಡೆಗಣನೆ ಮಾಡುತ್ತಿದ್ದಾರೆಂದು ಆರೋಪಿಸಿದರು. ಇದನ್ನೂ ಓದಿ: ‘ಆಕ್ಟ್ -1978’ ಸಿನಿಮಾ ಪ್ರೇರಣೆ – ಬ್ಯಾಂಕ್ ಮುಂದೆ ಪ್ರತಿಭಟಿಸಿ ನ್ಯಾಯ ಪಡೆದ ಮಹಿಳೆ
Advertisement
Advertisement
ರಾಜ್ಯದ ಜನರು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ವೇಳೆ ಬಿಜೆಪಿ ನಾಯಕರಿಂದ ಚುನಾವಣೆ ಜಪ ನಡೆಯುತ್ತಿದೆ. ವಿಧಾನಸಭಾ ಚುನಾವಣೆಗೂ ಮುನ್ನ ಟಿಕೆಟ್ ವಿಚಾರದಲ್ಲಿ ಹೊಸದುರ್ಗ ಬಿಜೆಪಿ ನಾಯಕರ ನಡುವೇ ಭಿನ್ನಮತ ಸ್ಫೋಟಗೊಂಡಿದೆ. ಹಾಗೆಯೇ ನಾನು 2023ಕ್ಕೆ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಆಗಿದ್ದೇನೆಂದು ತಿಳಿದ ಶಾಸಕ ಶೇಖರ್ ಹತಾಶರಾಗಿ ನನ್ನನ್ನು ಅವಮಾನಿಸುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನೆಚ್ಚಿನ ಶಿಕ್ಷಕನ ವರ್ಗಾವಣೆ – ಬಿಕ್ಕಿ ಬಿಕ್ಕಿ ಅತ್ತ ವಿದ್ಯಾರ್ಥಿಗಳು