ಬೆಂಗಳೂರು: ರಾಜ್ಯ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ರಾಜ್ಯದಲ್ಲಿ ಬಿರುಸಿನ ವಾತವರಣ ನಿರ್ಮಾಣವಾಗಿದೆ.
ಅತಂತ್ರ ಫಲಿತಾಂಶದ ಪರಿಣಾಮ ಅನೇಕ ನಾಯಕರನ್ನು ಬಿಜೆಪಿ ತನ್ನತ್ತ ಸೆಳೆಯಲು ಪ್ರಯತ್ನ ಮಾಡುತ್ತಿದೆ ಎಂದು ಹೇಳಲಾಗಿತ್ತಿದೆ. ಅದರಲ್ಲೂ ವೀರಶೈವ ಲಿಂಗಾಯತ ಶಾಸಕರಿಗೆ ಬಿಜೆಪಿ ಗಾಳ ಹಾಕಿದ್ದಾರೆ ಎಂದು ವಂದಂತಿ ಹಬ್ಬಿತ್ತು. ಈಗ ಎಲ್ಲಾ ವದಂತಿಗಳ ಬಗ್ಗೆ ಶಾಮನೂರು ಶಿವಶಂಕರಪ್ಪ ಕೆಪಿಸಿಸಿ ಕಚೇರಿಯ ಮುಂಭಾಗದಲ್ಲಿ ಸ್ಪಷ್ಟನೆ ಕೊಟ್ಟಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ. ಬಿಜೆಪಿ ಏನೇ ಮಾಡಿದರೂ ಲಿಂಗಾಯತರು ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ಪ್ರಮುಖ ಅಧ್ಯಕ್ಷರು, ವೀರಶೈವ ಮುಖಂಡರು ಹೋಗುವುದಿಲ್ಲ. ಅಲ್ಲದೇ ಈ ಬಾರಿಯ ಚುನಾವಣೆಯಲ್ಲಿ ಲಿಂಗಾಯತ ಧರ್ಮ ಪ್ರಭಾವ ಬೀರಿಲ್ಲ ಎಂದ್ರು.
ಸರ್ಕಾರ ನಡೆಸುವ ಕಸರತ್ತಿನಲ್ಲಿರುವ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಇಂದು ನಡೆಯಲಿದೆ. ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಯಲಿದ್ದು, ಜೆಡಿಎಸ್ ನ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಿದ್ದು, ಸಿಎಂ ಅಭ್ಯರ್ಥಿ ಆಗಲಿದ್ದಾರೆ. ಇದಾದ ಬಳಿಕ ರಾಜ್ಯಪಾಲರು ಸರ್ಕಾರ ರಚನೆಗೆ ಅವಕಾಶ ಕೊಟ್ಟರೆ ಕಾಂಗ್ರೆಸ್ -ಜೆಡಿಎಸ್ ಮೈತ್ರಿಯಲ್ಲಿ ಬಹುಮತ ಸಾಬೀತು ಮಾಡಬೇಕಾಗುತ್ತದೆ.
ಇನ್ನು ಶಾಸಕಾಂಗ ಪಕ್ಷದ ಸಭೆ ಬಳಿಕ ಜೆಡಿಎಸ್ ಶಾಸಕರು ರೆಸಾರ್ಟ್ ಗೆ ಪ್ರಯಾಣ ಮಾಡುವ ಪ್ಲಾನ್ ಮಾಡಲಿದ್ದು, ಆಪರೇಷನ್ ಕಮಲದಿಂದ ಶಾಸಕರನ್ನ ತಪ್ಪಿಸಲು ಜೆಡಿಎಸ್ ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದೆ. ಆದ್ದರಿಂದ ಕೇರಳದ ಕೊಚ್ಚಿನ್ ರೆಸಾರ್ಟ್ ಗೆ ಶಿಫ್ಟ್ ಆಗಲು ಕಾಂಗ್ರೆಸ್ ತೀರ್ಮಾನ ಮಾಡಿದ್ದು, ಪ್ರತ್ಯೇಕ ಬಸ್ ಮೂಲಕ ಕಾಂಗ್ರೆಸ್ ನಾಯಕರು ಕೊಚ್ಚಿನ್ ಗೆ ಶಿಫ್ಟ್ ಆಗುವ ಸಿದ್ಧತೆ ನಡೆಯುತ್ತಿದೆ ಎಂದು ಪಬ್ಲಿಕ್ ಟಿವಿ ಮೂಲಗಳು ತಿಳಿಸಿವೆ.