ಬೆಂಗಳೂರು: ನಮ್ಮ ಸಮಾಜಕ್ಕೆ ಸಂಬಂಧಿಸಿದ ವಿಷಯದಲ್ಲಿ ಲಿಂಗಾಯತ ಮುಖಂಡರು, ಸ್ವಾಮೀಜಿಗಳು ನಿರ್ಧಾರ ಮಾಡುತ್ತಾರೆ. ಇದರಲ್ಲಿ ಪೇಜಾವರ ಶ್ರೀಗಳು ಹಸ್ತಕ್ಷೇಪ ಮಾಡುವ ಅವಶ್ಯಕತೆ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.
ವೀರಶೈವ ಮತ್ತು ಲಿಂಗಾಯತ ಹಿಂದೂ ಧರ್ಮದ ಅಂಗ ಎನ್ನುವ ಪೇಜಾವರ ಶ್ರೀಗಳ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಬೌದ್ಧ, ಸಿಖ್ ಧರ್ಮಗಳಂತೆ ಬಸವ ಧರ್ಮ ಜಾಗತಿಕ ಧರ್ಮವಾಗಬೇಕಿದೆ. ಆರ್‍ಎಸ್‍ಎಸ್ ಬೆಂಬಲಿತರ್ಯಾರೂ ಈ ವಿಚಾರದಲ್ಲಿ ಮಧ್ಯಪ್ರವೇಶಿಸಬಾರದು. ಆರ್‍ಎಸ್‍ಎಸ್ ಒತ್ತಡಕ್ಕೆ ಮಣಿದು ನಮ್ಮದೇ ಸಮುದಾಯದ ಯಡಿಯೂರಪ್ಪ ಏನೇನೋ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Advertisement
ಸಿಎಂ ಸಿದ್ದರಾಮಯ್ಯ ಯಾವತ್ತೂ ಧರ್ಮವನ್ನ ಒಡೆಯುವ ಕೆಲಸ ಮಾಡುತ್ತಿಲ್ಲ. ಈ ಹಿಂದೆಯೇ ಲಿಂಗಾಯತ ಸಮುದಾಯದ ಪ್ರತ್ಯೇಕತೆಗೆ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಎಂ.ಬಿ ಪಾಟೀಲ್ ಹೇಳಿದರು.
Advertisement
ಸ್ವತಂತ್ರ ಧರ್ಮವಾಗಿ ವೀರಶೈವ ಘೋಷಣೆಗಾಗಿ ಕಾನೂನು ಹೋರಾಟಕ್ಕೂ ಸಿದ್ಧ. ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಕೇಂದ್ರಕ್ಕೂ ಮನವಿ ಮಾಡುತ್ತೇವೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
Advertisement
ಇದನ್ನೂ ಓದಿ: ಮೋದಿ, ಶಾ, ಬಿಎಸ್‍ವೈ ಕಟ್ಟಿಹಾಕಲು ಸಿಎಂ ಕಟ್ಟುತ್ತಿದ್ದಾರೆ LDMK ಸೇನೆ!