ದಾವಣಗೆರೆ: ಧರ್ಮ ದಂಗಲ್ ರಾಜ್ಯದಲ್ಲಿ ಜೋರಾಗುತ್ತಿದೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಶಿಫಾರಸು ಮಾಡಿದ ರಾಜ್ಯ ಸರ್ಕಾರದ ವಿರುದ್ಧ ವೀರಶೈವರು ಸಿಡಿದೆದ್ದಿದ್ದಾರೆ. ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ನಿನ್ನೆ ವೀರಶೈವ ಮಹಾಸಭಾ ಅಧ್ಯಕ್ಷ, ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಒಪ್ಪಿಕೊಂಡಿದ್ದರು. ಆದರೆ ಇವತ್ತು ವಿರೋಧಿಸಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ರಂಭಾಪುರಿ ಶ್ರೀಗಳು, ಉಜ್ಜಯಿನಿ ಶ್ರೀಗಳ ಜೊತೆ ಪ್ರತ್ಯೇಕ ಧರ್ಮದ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಶಾಮನೂರು ಶಿವಶಂಕರಪ್ಪ, ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
Advertisement
ನಿನ್ನೆ ಕ್ಯಾಬಿನೆಟ್ ಕೈಗೊಂಡ ನಿರ್ಧಾರವನ್ನು ಸ್ಪಷ್ಟವಾಗಿ ಓದಿದ ಮೇಲೆ ನಮಗೆ ಗೊತ್ತಾಯಿತು. ತಜ್ಞರು ಒನ್ ಸೈಡ್ ವರದಿ ನೀಡಿದ್ದಾರೆ. ವೀರಶೈವ ಲಿಂಗಾಯತ ಒಂದೇ ಎನ್ನುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನಿರ್ಧಾರ ಅಚಲ. ಈ ಬಗ್ಗೆ ಇದೇ 23 ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ತೆಗೆದುಕೊಳ್ತೇವೆ ಅಂತಾ ಸ್ಪಷ್ಟಪಡಿಸಿದ್ರು.ಕೆಲ ಸ್ವಾಮೀಜಿಗಳು ಬಹಳ ಬುದ್ಧಿವಂತಿಕೆಯಿಂದ ಪ್ರತ್ಯೇಕ ಧರ್ಮ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.
Advertisement
ರಂಭಾಪುರಿ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರದ್ದು ಆತುರದ ನಿರ್ಧಾರ, ಏಕಪಕ್ಷೀಯವಾಗಿ ತೀರ್ಮಾನ ಅಂತಾ ಟೀಕಿಸಿದ್ರು. ಇನ್ನು ಈ ಸಂಬಂಧ ಬೆಳಗ್ಗೆ ಮಾತನಾಡಿದ್ದ ಬಿಎಸ್‍ವೈ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೈಗೊಳ್ಳೋ ನಿರ್ಧಾರಕ್ಕೆ ಬದ್ಧ ಎಂದು ಹೇಳಿದ್ದರು.