ಬೆಂಗಳೂರು: ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಒಪ್ಪಲು ಸಾಧ್ಯವಿಲ್ಲ ಎಂದಿರುವ ಕೇಂದ್ರವು ನಿಲುವು ಅತಾರ್ಕಿಕವಾಗಿದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾದ ಮುಖಂಡರು ಮತ್ತು ಶಾಸಕರೂ ಆದ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಕೇಂದ್ರವು ತನ್ನ ಆದೇಶದಲ್ಲಿ ತಿಳಿಸಿರುವಂತೆ, 1871ರ ಜನಗಣತಿ ವೇಳೆ ಲಿಂಗಾಯತರು ಹಿಂದೂ ಧರ್ಮದ ಭಾಗವಾಗಿರಲಿಲ್ಲ. ಆವತ್ತು ಲಿಂಗಾಯತ, ಸ್ವತಂತ್ರ ಧರ್ಮದ ಮಾನ್ಯತೆ ಹೊಂದಿತ್ತು ಎಂಬುದು ಗಮನಾರ್ಹ ಎಂದು ಪಾಟೀಲ ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಪ್ರತ್ಯೇಕ ಧರ್ಮದ ಮಾನ್ಯತೆ ನೀಡಿದರೆ ಲಿಂಗಾಯತ-ವೀರಶೈವರಲ್ಲಿ ಈಗಾಗಲೇ ಪರಿಶಿಷ್ಟ ಜಾತಿ ಸೌಲಭ್ಯ ಪಡೆಯುತ್ತಿರುವವರು ಅದರಿಂದ ವಂಚಿತರಾಗುತ್ತಾರೆ ಎಂಬುದು ಸುಳ್ಳು. ಈಗಾಗಲೇ ಈ ವಿಷಯದ ಬಗ್ಗೆ ಸಿಖ್ ಮತ್ತು ಜೈನ ಧರ್ಮಗಳಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಾಗ ಯುಕ್ತಾಯುಕ್ತ ರೀತಿಯಲ್ಲಿ ಪರಿಣಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಲಿಂಗಾಯತ ಧರ್ಮ ಮಾನ್ಯತೆ ವೇಳೆಯಲ್ಲೂ ಈ ಅಂಶವನ್ನು ಪರಿಗಣಿಸುವ ಅಗತ್ಯ ಇತ್ತು ಎಂದು ಅವರು ಪ್ರತಿಪಾದಿಸಿದ್ದಾರೆ.
Advertisement
ಕೇಂದ್ರದ ನಿಲುವಿನಿಂದ ಬಸವ ಮತ್ತು ಲಿಂಗಾಯತ ಧರ್ಮದ ಅನುಯಾಯಿಗಳು ಆತಂಕಪಡುವ ಅಗತ್ಯವಿಲ್ಲ. ಲಿಂಗಾಯತ ಧರ್ಮ ಅಂದು, ಇಂದು ಮತ್ತು ಎಂದೆಂದಿಗೂ ಸ್ವತಂತ್ರ ಧರ್ಮ. ಆದ್ದರಿಂದ ಲಿಂಗಾಯತರು ಈ ಸಂದರ್ಭದಲ್ಲಿ ಸಂಯಮ ಮತ್ತು ಘನತೆಯಿಂದ ವರ್ತಿಸಬೇಕು. ಶಾಂತಿ ಕಾಪಾಡಿಕೊಂಡು ಹೋಗಬೇಕು ಎಂದು ಮನವಿ ಮಾಡಿದ್ದಾರೆ.
Advertisement
ಬೌದ್ಧ, ಸಿಖ್ ಮತ್ತು ಜೈನ ಧರ್ಮದಂತೆ ಬಸವ ಧರ್ಮವೂ ಪ್ರತ್ಯೇಕ ಧರ್ಮದ ಮಾನ್ಯತೆ ಹೊಂದಿದೆ. ಬಸವ ಧರ್ಮ ಮತ್ತು ಸಂಸ್ಕ್ರತಿ ಜಾಗತಿಕ ಮಾನ್ಯತೆ ಪಡೆಯಬೇಕು. ಮುಂದಿನ ನಡೆಯನ್ನು ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು, ಕಾನೂನು ತಜ್ಞರು, ಮಠಾಧೀಶರು ಮತ್ತು ಸಮಾಜದ ಹಿರಿಯರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಪಾಟೀಲ ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv