– ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್; ಹಣಕ್ಕೆ ಬೇಡಿಕೆ
– ಸಿಎಂ, ಗೃಹಸಚಿವರು, ಮಹಿಳಾ ಆಯೋಗಕ್ಕೂ ದೂರು
ಬೆಂಗಳೂರು: ಲಿಂಗಾಯತ ಸಮಾಜದ ಪ್ರಭಾವಿ ಸ್ವಾಮೀಜಿಯೊಬ್ಬರ (Lingayat Swamiji) ವಿರುದ್ಧ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ತನಗೆ ಲೈಂಗಿಕ ದೌರ್ಜನ್ಯ ನೀಡಿದ್ದಾಗಿ ಹಾಗೂ ಅತ್ಯಾಚಾರ ಎಸಗಿರುವುದಾಗಿ ದೂರು ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳು, ಗೃಹಸಚಿವರು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಮಾನವ ಹಕ್ಕುಗಳ ಆಯೋಗ, ಮಹಿಳಾ ಆಯೋಗಕ್ಕೆ (Women Commission) ಪತ್ರದ ಮೂಲಕ ದೂರು ಸಲ್ಲಿಸಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

ಆ ಪ್ರಭಾವಿ ಸ್ವಾಮೀಜಿ ನನ್ನನ್ನ ಮಠಕ್ಕೆ (Mutt) ಕರೆಸಿ ಪ್ರಸಾದ ಕೊಡುತ್ತೇನೆ ಎಂದು ಹೇಳಿ, ನನ್ನ ವಿಶ್ವಾಸ ದುರುಪಯೋಗ ಮಾಡಿಕೊಂಡಿದ್ದಾರೆ. ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದ್ದಾರೆ. ಆ ಸಮಯದಲ್ಲಿ ನನಗೆ ತಿಳಿವಳಿಕೆಯಿಲ್ಲದೇ ವಿಡಿಯೋ ಮಾಡಿಕೊಂಡಿದ್ದಾರೆ. ಆ ವಿಡಿಯೋ ಬಳಸಿ ನನ್ನನ್ನ ಬ್ಲ್ಯಾಕ್‌ಮೇಲ್ ಮಾಡ್ತಿದ್ದಾರೆ. ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ರೆ ನಿನ್ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುತ್ತೇನೆ ಅಂತ ಬೆದರಿಕೆ ಹಾಕಿದ್ದಾರೆ. ಇದರಿಂದ ನನಗೆ ಭಯವಾಗಿದ್ದು, ಮಾನಸಿಕ ಒತ್ತಡಕ್ಕೂ ಒಳಗಾಗಿದ್ದೇನೆ. ಆದ್ದರಿಂದ ಆ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳುವಂತೆ ವಿಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.
ಸಂತ್ರಸ್ತೆ ಸೂರಿನಲ್ಲಿ ಏನಿದೆ?
ಪ್ರಭಾವಿ ಲಿಂಗಾಯತ ಸ್ವಾಮೀಜಿಯವರು, ದೈಹಿಕ ಮತ್ತು ಮಾನಸಿಕವಾಗಿ ಲೈಂಗಿಕ ಶೋಷಣೆ ಹಾಗೂ ನನ್ನ ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಿಸುವುದಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಾ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ, ಕಿರುಕುಳ ನೀಡುತ್ತಿದ್ದಾರೆ. ಇದನ್ನೂ ಓದಿ: ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

ಬೆಂಗಳೂರಿನ ನಿವಾಸಿಯೇ ಆಗಿರುವ ನಾನು, ಲಿಂಗಾಯತ ಸಮಾಜಕ್ಕೆ ಸೇರಿದವಳಾಗಿದ್ದು, ಆ ಪ್ರಭಾವಿ ಸ್ವಾಮೀಜಿಯ ಭಕ್ತೆಯಾಗಿದ್ದೇನೆ. ಬೆಂಗಳೂರಿಗೆ ಬಂದಾಗ ಹಲವು ಬಾರಿ ಭೇಟಿಯಾಗಿ ಮಾತನಾಡಿ ಅವರ ಹೋರಾಟಗಳ ಬಗ್ಗೆ ಬೆಂಬಲ ಸಹ ನೀಡಿದ್ದೆ. ಹೀಗೆ ಪರಿಚಯವಾಗಿದ್ದ ಸ್ವಾಮೀಜಿಯವರು ನನ್ನನ್ನ ಮಠಕ್ಕೆ ಕರೆಸಿ ಪ್ರಸಾದ ಕೊಡುತ್ತೇನೆ ಎಂದು ಹೇಳಿದ್ದರು. ಆಗ ನನ್ನ ವಿಶ್ವಾಸ ದುರುಪಯೋಗ ಮಾಡಿಕೊಂಡು ನನ್ನೊಂದಿಗೆ ಲೋಕಬಿರಾಮವಾಗಿ ಮಾತನಾಡುತ್ತಾ ಅಸಭ್ಯವಾದ ಪದಗಳನ್ನು ಬಳಸಿ, ಮೈಕೈ ಮುಟ್ಟುಯತ್ತಾ ನನ್ನೊಂದಿಗೆ ದೈಹಿಕವಾಗಿ ತಪ್ಪಾಗಿ ವರ್ತಿಸಿದ್ರು. ಇದನ್ನೂ ಓದಿ: ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ
ಆ ಸಮಯದಲ್ಲಿ ನನಗೆ ತಿಳುವಳಿಕೆಯಿಲ್ಲದೇ ನನ್ನ ಮೇಲೆ ನಡೆಸಿರುವ ಲೈಂಗಿಕ ದೌರ್ಜನ್ಯದ ಖಾಸಗಿ ವಿಡಿಯೋವನ್ನು ಮಾಡಿಕೊಂಡಿದ್ದಾರೆ. ಆ ವಿಡಿಯೋವನ್ನು ಬಳಸಿ ಅವರು ನನ್ನನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಪ್ರತಿ ರಾತ್ರಿ ಫೋನ್ ಮಾಡಿ ಬೆತ್ತಲೆ ವಿಡಿಯೋ ಕಾಲ್ ಮಾಡು, ಇಲ್ಲದಿದ್ದರೆ ನಿನ್ನ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತೇನೆ ಎಂದು ಬೆದರಿಸುತ್ತಿದ್ದಾರೆ. ಈ ಕಾರಣದಿಂದ ನನಗೆ ಭಯ, ಮಾನಸಿಕ ಒತ್ತಡ ಹಾಗೂ ಅವಮಾನ ಉಂಟಾಗಿದೆ. ಆದ್ದರಿಂದ, ಆ ಸ್ವಾಮೀಜಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಹಾಗೂ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

