ಬೆಂಗಳೂರು: ಮಂತ್ರಿಗಿರಿಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಹೈಕಮಾಂಡ್ ಗೆ ದುಂಬಾಲು ಹೂಡುತ್ತಿದ್ದು, ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಅಧಿಕಾರಿ ಎಚ್.ಡಿ ದೇವೇಗೌಡರ ಮನೆಗೆ ಲಿಂಗಾಯತ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ.
ದೇವೇಗೌಡರ ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ತುಮಕೂರಿನ ಮತ್ತು ನೆಲಮಂಗಲ ಮಠದ ಸ್ವಾಮೀಜಿಗಳು ಆಗಮಿಸಿದ್ದಾರೆ. ಸ್ವಾಮೀಜಿಗಳು ತುಮಕೂರು ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಕೇಳಲು ಆಗಮಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
Advertisement
ತುಮಕೂರು ಗ್ರಾಮಾಂತರ ಶಾಸಕ ಗೌರಿ ಶಂಕರ್ ಗೆ ಸಚಿವ ಸ್ಥಾನ ನೀಡುವಂತೆ ಸ್ವಾಮೀಜಿಗಳು ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಸಿದ್ದಲಿಂಗೇಶ್ವರ ಮಠದ ಶಿವ ಪಂಚಾಕ್ಷರಿ ಸ್ವಾಮೀಜಿ, ಪಿರಂಗೀಶ್ವರ ಮಠದ ಶಿವ ರುದ್ರ ಶಿವಾಚಾರ್ಯ ಸ್ವಾಮೀಜಿ, ರುದ್ರ ಮುನೇಶ್ವರ್ ಮಠದ ಚಂದ್ರ ಶೇಖರ ಸ್ವಾಮೀಜಿ, ಅಳ್ಳೂರು ಮಠದ ಚೆನ್ನಬಸವ ಸ್ವಾಮೀಜಿ ಹಾಗೂ ವನಕಲ್ಲು ಮಠದ ರಮಾನಂದ ಸ್ಬಾಮೀಜಿಗಳು ದೇವೇಗೌಡರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Advertisement
ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ವನಕಲ್ಲು ಮಠದ ರಮಾನಂದ ಸ್ವಾಮೀಜಿ ಮಾತನಾಡಿ, ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ದೇವೇಗೌಡರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಕೋರಲು ಬಂದಿದ್ದೇವೆ. ಮಠದ ಕಾರ್ಯಕ್ರಮವೊಂದಕ್ಕೆ ಆಹ್ವಾನ ನೀಡಲು ಬಂದಿದ್ದು, ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Advertisement