Saturday, 20th July 2019

ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ವೀರಶೈವ, ಲಿಂಗಾಯತ ಕಾರ್ಯಕರ್ತರ ನಡುವೆ ಮಾರಾಮಾರಿ

ಕಲಬುರಗಿ: ರಾಜ್ಯ ಸರ್ಕಾರ ಪ್ರತ್ಯೇಕ ಲಿಂಗಾಯತ ಧರ್ಮ ವರದಿಯನ್ನು ಒಪ್ಪಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರ ಕೈಗೊಂಡಿದ್ದಕ್ಕೆ ಪರ, ವಿರೋಧ ವ್ಯಕ್ತವಾಗಿದೆ.

ನಗರದ ಪಟೇಲ್ ವೃತ್ತದಲ್ಲಿ ವೀರಶೈವರು ತೀರ್ಮಾನವನ್ನು ವಿರೋಧಿಸಿದ್ದರೆ, ಲಿಂಗಾಯತರು ಸ್ವಾಗತಿಸಿದ್ದಾರೆ. ಇದೇ ವೇಳೆ ರಾಜ್ಯ ಸರ್ಕಾರ ಶಿಫಾರಸ್ಸು ಕೈಗೊಳ್ಳಲು ತೀರ್ಮಾನಿಸಿದ ಹಿನ್ನೆಲೆಯಲ್ಲಿ ಸಂಭ್ರಮಾಚಣೆಯಲ್ಲಿ ತೊಡಗಿದ್ದ ಲಿಂಗಾಯತರು ಹಾಗೂ ವೀರಶೈವರ ನಡುವೆ ಮಾತಿನ ಚಕಮಕಿ ನಡೆದು ಮಾರಾಮರಿ ನಡೆದಿದೆ.

ಪ್ರತಿಭಟನೆ ನಡೆಸುತ್ತಿದ್ದಾಗ ವೀರಶೈವರು ಚಪ್ಪಲಿ ತೋರಿಸಿದ್ದಾರೆ. ಈ ವೇಳೆ ಆರಂಭದಲ್ಲಿ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದ್ದು ಈ ಸಂದರ್ಭದಲ್ಲಿ ವೀರಶೈವ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ. ವಿಕೋಪಕ್ಕೆ ಹೋಗಿ ವೀರಶೈವ ಲಿಂಗಾಯತ ಮುಖಂಡ ಎಮ್ ಎಸ್ ಪಾಟೀಲ್ ನರಿಬೋಳ್ ಮತ್ತು ಕಾರ್ಯಕರ್ತರು ಲಿಂಗಾಯತ ಮುಖಂಡರಿಗೆ ಚಪ್ಪಲಿ ತೋರಿಸಿದ್ದಾರೆ. ಇದರಿಂದ ರೊಚ್ವಿಗೆದ್ದ ಲಿಂಗಾಯತ ಮುಖಂಡರು, ಎಮ್ ಎಸ್ ಪಾಟೀಲ್ ನರಿಬೋಳ್‍ನ ಶರ್ಟ್ ಹಿಡಿದು ಎಳೆದಾಡಿ ಮನಬಂದಂತೆ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಹೆಚ್ಚಿನ ಪೊಲೀಸರು ಇಬ್ಬರ ಜಗಳವನ್ನ ಬಿಡಿಸಲು ಹರಸಾಹಸಪಟ್ಟರು.

ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಎಂಬಿ ಪಾಟೀಲ್, ವಿನಯ್ ಕುಲಕರ್ಣಿ ಹಾಗೂ ಬಸವರಾಜ್ ಹೊರಟ್ಟಿ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ವೀರಶೈವರು ಪ್ರತಿಭಟನೆ ನಡೆಸಿದರು. ಅಲ್ಲದೇ ರಾಜ್ಯ ಸರ್ಕಾರದ ಶಿಫಾರಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಲು ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಸಿಎಂ ಧರ್ಮ ಒಡೆಯುವ ಕೆಲಸ ಮಾಡಿದ್ದಾರೆ: ರಂಭಾಪುರಿ ಶ್ರೀ

ಪೊಲೀಸರು ಮಧ್ಯಸ್ಥಿಕೆ ವಹಿಸಿದ್ದರು ಸಹ ವೀರಶೈವರ ಮೇಲೆ ಲಿಂಗಾಯತರ ಸಿಟ್ಟು ಮಾತ್ರ ಕಡಿಮೆಯಾಗಲಿಲ್ಲ. ಇನ್ನು ಘಟನೆ ನಂತರ ಸ್ಥಳಕ್ಕೆ ಭೇಟಿ ನೀಡಿದ ಕಲಬುರಗಿ ಎಸ್ಪಿ ಎನ್.ಶಶಿಕುಮಾರ್ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸುವುದ್ದಾಗಿ ಹೇಳಿದ್ದಾರೆ. ಇದನ್ನೂ ಓದಿ: ಲಿಂಗಾಯತ, ವೀರಶೈವ ಪ್ರತ್ಯೇಕ ಧರ್ಮಕ್ಕೆ ಒಪ್ಪಿಗೆ – ಕೇಂದ್ರಕ್ಕೆ ಶೀಘ್ರವೇ ಸಿದ್ದು ಸರ್ಕಾರದಿಂದ ಶಿಫಾರಸ್ಸು

ಹಲ್ಲೆ ನಡೆದ ಬಗ್ಗೆ ಪ್ರತಿಕ್ರಿಯಿಸಿದ ಲಿಂಗಾಯತರು, ನಾವು ಯಾರು ಹಲ್ಲೆ ನಡೆಸಿಲ್ಲ, ಕೆಲವರು ಶಾಂತಿ ಹಾಗೂ ಸುವ್ಯವಸ್ಥೆ ಕದಡಲು ಯತ್ನಸಿದ್ದಾರೆ ಎಂದು ಆರೋಪಿಸಿದರು. ಅಷ್ಟೇ ಅಲ್ಲೇ ಹಲವು ವರ್ಷಗಳ ಹೋರಾಟಕ್ಕೆ ಈಗ ಜಯ ಸಿಕ್ಕಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *