ಬೆಂಗಳೂರು: ಕೋಟ್ಯಂತರ ರೂ. ಮೌಲ್ಯದ ಮಾದಕ ವಸ್ತು ಮಾರಾಟ ಕೇಸ್‌ಗೆ ಸಂಬಂಧಿಸಿದಂತೆ ನಗರದ (Bengaluru) ಎರಡು ಕಡೆ ಇಡಿ ಅಧಿಕಾರಿಗಳು (ಜಾರಿ ನಿದೇಶನಾಲಯ) (ED Raids) ದಾಳಿ ನಡೆಸಿದ್ದಾರೆ.
ಹೈದ್ರಾಬಾದ್ (Hyderabad) ಎನ್‌ಡಿಪಿಎಸ್ ಕೇಸ್‌ನಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಹೈದ್ರಾಬಾದ್‌ನಲ್ಲಿ 7 ಕಡೆ ದಾಳಿ ನಡೆಸಲಾಗಿದೆ. ಇತ್ತೀಚೆಗೆ ಹೈದ್ರಾಬಾದ್ ಪೊಲೀಸರು ಈ ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದರು. ಇದನ್ನೂ ಓದಿ: ಐಸಿಸ್‌ಗೆ ಯುವಕರನ್ನು ಸೇರಿಸಲು ಹಣ ಸಂದಾಯ ಆರೋಪ – ಬೆಂಗ್ಳೂರಲ್ಲಿ ಮುಸ್ಲಿಂ ಸಂಘಟನೆ ಮೇಲೆ ಇಡಿ ದಾಳಿ
ಇತ್ತೀಚೆಗೆ ಥೈಲ್ಯಾಂಡ್‌ನಿಂದ ಹೈದರಾಬಾದ್ ವಿಮಾನ ನಿಲ್ದಾಣದ ಮೂಲಕ ವ್ಯಾಕ್ಯೂಮ್-ಸೀಲ್ಡ್ ಪ್ಯಾಕೇಜ್‌ಗಳಲ್ಲಿ ಭಾರತಕ್ಕೆ ಅಕ್ರಮವಾಗಿ 1,500 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ (Hydroponic Ganja) ಸಾಗಿಸುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.
ಈ ಮಾದಕವಸ್ತು ಜಾಲದ ಮೂಲಕ ಗಳಿಸಲಾದ ಕೋಟ್ಯಂತರ ರೂ. ಅಕ್ರಮ ಹಣದ ವರ್ಗಾವಣೆಯ ಲಿಂಕ್‌ಗಳನ್ನು ಪತ್ತೆಹಚ್ಚಲು ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?
