ಬೀದರ್: ಆಯುಷ್ಮಾನ್ ಭಾರತ (Ayushman Bharat) ಆರೋಗ್ಯ ಕರ್ನಾಟಕ ಯೋಜನೆಯಡಿ ಜಿಲ್ಲೆಯಲ್ಲೇ ಅತಿ ಹೆಚ್ಚು ರೋಗಿಗಳಿಗೆ ವೈದ್ಯಕೀಯ ಸೇವೆ ಒದಗಿಸಿದ್ದಕ್ಕೆ ಚಿದ್ರಿ ರಸ್ತೆಯಲ್ಲಿ ಇರುವ ಸಾಯಿ ಗಣೇಶ ಕಿಡ್ನಿ ಆ್ಯಂಡ್ ಎಂಡ್ರಾಲಜಿ ಆಸ್ಪತ್ರೆಗೆ (Sai Ganesh Kidney And Andrology Hospital) ಪ್ರಶಸ್ತಿ ಲಭಿಸಿದೆ.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಗಂಜಲಖೇಡ ಪ್ರಶಸ್ತಿ ಪ್ರದಾನ ಮಾಡಿದರು.
Advertisement
Advertisement
ಆಸ್ಪತ್ರೆಯಲ್ಲಿ ಬಿಪಿಎಲ್ ಕಾರ್ಡ್(BPL Card) ಹೊಂದಿದವರಿಗೆ ಯೋಜನೆಯಡಿ ನಿತ್ಯ ಉಚಿತ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ. ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಲಾಗುತ್ತಿದೆ ಎಂದು ಪ್ರಶಸ್ತಿ ಸ್ವೀಕರಿಸಿದ ಆಸ್ಪತ್ರೆಯ ಮುಖ್ಯಸ್ಥರೂ ಆದ ಕಿಡ್ನಿ ತಜ್ಞ ಡಾ. ಶಿವಪುತ್ರ ಖಪ್ಲೆ ಹೇಳಿದರು. ಇದನ್ನೂ ಓದಿ: ಲೋಕಸಮರಕ್ಕೆ ಆಪರೇಷನ್ ಹಸ್ತ – ಕರಾವಳಿಯಿಂದ ಸ್ಪರ್ಧಿಸ್ತಾರಾ ಬಿಜೆಪಿಯ ಆ ಸಂಸದ?
Advertisement
ಈ ಪ್ರಶಸ್ತಿ ಆಸ್ಪತ್ರೆಯ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ರೋಗಗಳಿಗೆ ಯೋಜನೆ ಲಾಭ ದೊರಕಿಸಿಕೊಡುವ ದಿಸೆಯಲ್ಲಿ ಕಾರ್ಯ ನಿರ್ವಹಿಸಲಾಗುವುದು ಎಂದು ತಿಳಿಸಿದರು.
Advertisement
Web Stories