ಸಾಂದರ್ಭಿಕ ಚಿತ್ರ
ಜಕಾರ್ತ: ಇಂಡೋನೇಷ್ಯಾದ ಲಯನ್ ಏರ್‌ಲೈನ್ಸ್ ಸಂಸ್ಥೆಗೆ ಸೇರಿದ್ದ ವಿಮಾನವೊಂದು ಸಮುದ್ರದಲ್ಲಿ ಪತನಗೊಂಡ ಪರಿಣಾಮ 189 ಮಂದಿ ಪ್ರಯಾಣಿಕರು ದಾರುಣವಾಗಿ ಮೃತಪಟ್ಟ ಘಟನೆ ಪಾಂಗ್‍ಕಲ್ ದ್ವೀಪದ ಬಳಿ ಸಂಭವಿಸಿದೆ.
Advertisement
ಇಂದು ಬೆಳಗ್ಗೆ ರಾಜಧಾನಿ ಜಕಾರ್ತದಿಂದ ಪಾಂಗ್‍ಕಲ್ ಪಿನಾಗ್ ದ್ವೀಪಕ್ಕೆ ಲಯನ್ಸ್ ಏರ್‌ಲೈನ್ಸ್ ಸಂಸ್ಥೆಗೆ ಸೇರಿದ್ದ ಜಿಟಿ610 ವಿಮಾನ ಎಂದಿನಂತೆ 6.20ರ ಸುಮಾರಿಗೆ ಟೇಕ್ ಆಫ್ ಆಗಿ ಹೊರಟಿತ್ತು. ಸುಮಾರು 7.30ರ ಹೊತ್ತಿಗೆ ಪಾಂಗ್‍ಕಲ್ ಪಿನಾಂಗ್ ತಲುಪಬೇಕಿತ್ತು. ಆದರೆ ಟೇಕಾಫ್ ಆದ 13 ನಿಮಿಷಗಳ ಬಳಿಕ ಏಕಾಏಕಿ ರೇಡಾರ್ ಸಂಪರ್ಕದಿಂದ ವಿಮಾನ ನಾಪತ್ತೆಯಾಗಿತ್ತು. ಅಲ್ಲದೇ ಕೊನೆಯ ಬಾರಿಗೆ ಜಿಟಿ610 ವಿಮಾನವು ಬೋಯಿಂಗ್ 737 ಮ್ಯಾಕ್ಸ್ 8 ಲಯನ್ ವಿಮಾನದ ಸಂಪರ್ಕಕ್ಕೆ 6.33ರಲ್ಲಿ ಯತ್ನಿಸಿತ್ತು. ಇದಾದ ಬಳಿಕ ಪಾಂಗ್‍ಕಲ್ ದ್ವೀಪದ ಬಳಿ ಸಮುದ್ರದಲ್ಲಿ ವಿಮಾನ ಪತನಗೊಂಡಿದೆ.
Advertisement
Kurz nach dem Start in #Jakarta stürzt ein indonesisches Flugzeug ins Meer. #LionAircrash pic.twitter.com/Mdz7INXS8X
— ZDFheute (@ZDFheute) October 29, 2018
Advertisement
ವಿಮಾನ ಬೀಳುತ್ತಿರುವ ದೃಶ್ಯವನ್ನು ಜಕಾರ್ತ ಬಂದರಿನಿಂದ ಹೊರಟಿದ್ದ ಬೋಟ್ ಸಿಬ್ಬಂದಿ ನೋಡಿದ್ದು, ಕೂಡಲೇ ರಕ್ಷಣಾ ತಂಡಗಳಿಗೆ ವಿಷಯವನ್ನು ಮುಟ್ಟಿಸಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತೆರಳಿದ ರಕ್ಷಣಾ ತಂಡಗಳು ಪ್ರಯಾಣಿಕರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿವೆ. ಅಲ್ಲದೇ ವಿಮಾನ ಪತನವಾದ ಸ್ಥಳದಲ್ಲಿ ವಿಮಾನದ ಅವಶೇಷಗಳು ಸಹ ಪತ್ತೆಯಾಗಿವೆ.
Advertisement
ಸಮುದ್ರದಲ್ಲಿ ಪತನವಾದ ವಿಮಾನದಲ್ಲಿ ಸಿಬ್ಬಂದಿ ಸೇರಿದಂತೆ ಒಟ್ಟು 189 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ವಿಮಾನವು 210 ಪ್ರಯಾಣಿಕರ ಸಾಮರ್ಥ್ಯವನ್ನು ಹೊಂದಿದ್ದು, ಕೆಲವರು ಬದುಕುಳಿದರಬಹುದೆಂಬ ಶಂಕೆಯನ್ನು ರಕ್ಷಣಾ ಪಡೆಗಳು ವ್ಯಕ್ತಪಡಿಸಿವೆ.
A Lion Air flight from Jakarta to Pangkal Pinang which went missing 13 minutes after take-off has crashed into the sea
Read @ANI story | https://t.co/LFFf0UkLD0 pic.twitter.com/FmIzoJ3vrG
— ANI Digital (@ani_digital) October 29, 2018
ಈ ಕುರಿತು ಪ್ರತಿಕ್ರಿಯಿಸಿರುವ ಲಯನ್ ಏರ್‌ಲೈನ್ಸ್ ನಿರ್ವಾಹಕ ಎಡ್ವರ್ಡ್ ಸಿರೈಟ್, ಸದ್ಯ ನಾವು ಮಾಹಿತಿಯನ್ನು ಕಲೆಹಾಕುತ್ತೀದ್ದೇವೆ. ಈ ಕ್ಷಣದಲ್ಲಿ ಯಾವುದೇ ರೀತಿಯ ಹೇಳಿಕೆಗಳನ್ನು ನೀಡಲು ಸಾಧ್ಯವಿಲ್ಲ. ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಿ ಘಟನೆ ಸಂಪೂರ್ಣ ವರದಿ ನೀಡುತ್ತೇವೆ ಎಂದು ಹೇಳಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Video appearing to show some debris in the crash area. #LionAir #LionAircrash pic.twitter.com/gIWiNHuvOy
— Ryan Rocca (@ryan_rocca) October 29, 2018