ನವದೆಹಲಿ: ಮಹತ್ವದ ಕಾರ್ಯಾಚರಣೆಯಲ್ಲಿ ಛತ್ತರ್‌ಪುರದಲ್ಲಿ ನಿರ್ಮಿಸಿದ್ದ ಮದ್ಯದ ಉದ್ಯಮಿ ದಿವಂಗತ ಪಾಂಟಿ ಚಡ್ಡಾ (Ponty Chadha )ಅವರ 400 ಕೋಟಿ ರೂ. ಮೌಲ್ಯದ ಫಾರ್ಮ್‌ಹೌಸ್ ಅನ್ನು ನೆಲಸಮಗೊಳಿಸಲಾಗಿದೆ ಎಂದು ದೆಹಲಿ ಅಭಿವೃದ್ಧಿ ಪ್ರಾಧಿಕಾರದ (Delhi Development Authority) ಅಧಿಕಾರಿಗಳು ತಿಳಿಸಿದ್ದಾರೆ.
ನಗರದಲ್ಲಿ ಅನಧಿಕೃತ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಅಕ್ರಮ ಕಟ್ಟಡಗಳ ನಿರ್ಮಾಣ ತೆರವು ಕಾರ್ಯಾಚರಣೆ ಆರಂಭಿಸಿರುವ ಡಿಡಿಎ ಭಾರೀ ಪ್ರಮಾಣದ ಆಸ್ತಿಯನ್ನು ವಶಪಡಿಸಿಕೊಂಡಿದೆ.
Advertisement
Advertisement
ಸುಮಾರು 10 ಎಕರೆಯಷ್ಟು ವಿಸ್ತೀರ್ಣದಲ್ಲಿ ನಿರ್ಮಿಸಿದ್ದ ಮದ್ಯದ ಉದ್ಯಮಿ ದಿವಂಗತ ಪಾಂಟಿ ಚಡ್ಡಾ ಅಲಿಯಾಸ್ ಗುರುದೀಪ್ ಸಿಂಗ್ ಅವರ ಫಾರ್ಮ್‌ಹೌಸ್ (Farmhouse) ಅನ್ನು ನೆಲಸಮಗೊಳಿಸಿದೆ. ಈ ಫಾರ್ಮ್‌ಹೌಸ್ ಸುಮಾರು 400 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಸತತ ಎರಡು ದಿನಗಳ ಕಾರ್ಯಾಚರಣೆ ಬಳಿಕ 10 ಎಕರೆ ಭೂಪ್ರದೇಶವನ್ನು ದೆಹಲಿ ಅಭಿವೃದ್ಧಿ ಪ್ರಾಧಿಕಾರ ತನ್ನ ವಶಕ್ಕೆ ತೆಗೆದುಕೊಂಡಿದೆ. ದಿವಂಗತ ಪಾಂಟಿ ಚಡ್ಡಾ ಅಲಿಯಾಸ್ ಗುರುದೀಪ್ ಸಿಂಗ್ ಅವರ ಸಂಸ್ಥೆ ಅಥವಾ ಕುಟುಂಬಗಳಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದನ್ನೂ ಓದಿ: BJP Lok Sabha Candidates: ಮೊದಲ ಪಟ್ಟಿಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ಸೀಟು?
Advertisement
ಅಲ್ಲದೇ ಕಳೆದ ಜನವರಿ 13 ಮತ್ತು 17ರಂದು ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ನಡೆಸಲಾದ ಒತ್ತುವರಿ ಕಾರ್ಯಾಚರಣೆಯಲ್ಲಿ ಹಲವು ವಾಣಿಜ್ಯ ಶೋ ರೂಮ್‌ಗಳನ್ನು ನೆಲಸಮಗೊಳಿಸಿ 4 ಎಕರೆ ಭೂಪ್ರದೇಶವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿತ್ತು. ಇದನ್ನೂ ಓದಿ: ಪತಿ ಇರುವಾಗಲೇ ಸ್ಪೇನ್ ಮಹಿಳೆಯ ಮೇಲೆ ಜಾರ್ಖಂಡ್‌ನಲ್ಲಿ 7 ಮಂದಿಯಿಂದ ಗ್ಯಾಂಗ್‌ರೇಪ್