ನವದೆಹಲಿ: ಹೊಸ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಜಾರಿ ನಿರ್ದೇಶನಾಲಯ ಶುಕ್ರವಾರ ಮೊದಲ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಿದೆ. ಇದಕ್ಕೂ ಮುನ್ನ ಇಡಿ ಕೇಜ್ರಿವಾಲ್ ಇಡೀ ಪ್ರಕರಣದ ಕಿಂಗ್ ಪಿನ್ ಎಂದು ಆರೋಪಿಸಿತ್ತು.
ಸುಪ್ರೀಂಕೋರ್ಟ್ ನಲ್ಲಿ (Supreme Court) ಮಧ್ಯಂತರ ಜಾಮೀನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಯುತ್ತಿದ್ದು ಈ ಸಂಬಂಧ ಮಧ್ಯಂತರ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಜಾಮೀನು ನೀಡಲು ಆಕ್ಷೇಪ ವ್ಯಕ್ತಪಡಿಸಿರುವ ಇಡಿ ಅಧಿಕಾರಿಗಳು ಪ್ರಕರಣದಲ್ಲಿ ಕೇಜ್ರಿವಾಲ್ ಪಾತ್ರಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಫೈಲ್ ಮಾಡಲಿದೆ. ಇದನ್ನೂ ಓದಿ: ದೇಶದಲ್ಲಿ ಆಡಳಿತ ನಡೆಸಿದವರ ಕುಟುಂಬದಿಂದ ಇಂಥ ಕೃತ್ಯ ಆಯ್ತಲ್ಲಾ ಎಂಬ ನೋವಿದೆ: ಶಿವಲಿಂಗೇಗೌಡ
Advertisement
Advertisement
ಕಳೆದ ವಿಚಾರಣೆಯಲ್ಲಿ ಲೋಕಸಭಾ ಚುನಾವಣೆ (Loksabha Elections 2024) ಹಿನ್ನೆಲೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಸಕರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿತ್ತು. ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದರೆ ಅವರ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಲು ಬಯಸುವುದಿಲ್ಲ ಎಂದು ಪೀಠವು ಹೇಳಿತು, ಏಕೆಂದರೆ ಇದು ಹಿತಾಸಕ್ತಿ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು ಹೇಳಿತ್ತು.
Advertisement
ಈ ಹಂತದಲ್ಲಿ ಚಾರ್ಜ್ ಶೀಟ್ ಸಲ್ಲಿಸುವ ಮೂಲಕ ಕೇಜ್ರಿವಾಲ್ ಪ್ರಕರಣದಲ್ಲಿ ಹೇಗೆ ಸಂಬಂಧ ಹೊಂದಿದ್ದಾರೆ? ಅವರಿಗೆ ಜಾಮೀನು ನೀಡಿದರೆ ತನಿಖೆಯ ಮೇಲೆ ಆಗಬಹುದಾದ ಪರಿಣಾಯಗಳ ಬಗ್ಗೆ ಕೋರ್ಟ್ ಗಮನ ಸೆಳೆಯುವ ಪ್ರಯತ್ನ ಮಾಡಲಿದೆ ಎಂದು ಮೂಲಗಳು ಹೇಳಿವೆ.