ಚಿಕ್ಕಬಳ್ಳಾಪುರ: ಲಾಕ್‍ಡೌನ್ ನಡುವೆ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿದ್ದೆ ತಡ ಮದ್ಯಪ್ರಿಯರು ಸರದಿ ಸಾಲಿನಲ್ಲಿ ನಿಂತು ಮದ್ಯ ಖರೀದಿಗೆ ಮುಗಿಬಿದ್ದಿದ್ದರು. ಆದರೆ ಇದೀಗ ಮದ್ಯಪ್ರಿಯರು ಎಣ್ಣೆ ಅಂಗಡಿಯತ್ತ ಮುಖ ಮಾಡುತ್ತಿಲ್ಲ.
ಇಷ್ಟು ದಿನ ಕೇವಲ ಎಂಎಸ್‍ಐಎಲ್‍ನಲ್ಲಿ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಇಂದಿನಿಂದ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಆದರೆ ಇಷ್ಟು ದಿನ ಚಿಕ್ಕಬಳ್ಳಾಪುರದ ಮದ್ಯದಂಗಡಿಗಳ ಮುಂದೆ ಮದ್ಯಪ್ರಿಯರು ಕ್ಯೂ ಇರುತ್ತಿದ್ದರು. ಆದರೆ ಇಂದು ಬಹುತೇಕ ಮದ್ಯದಂಗಡಿಗಳ ಎದುರು ಗ್ರಾಹಕರಿಲ್ಲದೆ ಬಣಗುಡುವಂತಿತ್ತು.
Advertisement
Advertisement
ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ತಕ್ಷಣ ಹಲವರು ಮತ್ತೆ ಲಾಕ್‍ಡೌನ್ ಆಗಬಹದು ಅಂತ ಸ್ಟಾಕ್ ಮಾಡಿಕೊಂಡಿದ್ದಾರೆ. ಹೀಗಾಗಿ ಈಗಾಗಲೇ ಮದ್ಯ ಸ್ಟಾಕ್ ಮಾಡಿಕೊಂಡಿರುವುದರಿಂದ ಮೊದಲು ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದ ವೈನ್ ಸ್ಟೋರ್‌ಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ಇಂದಿನಿಂದ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ.