ಶಿವಮೊಗ್ಗ: ರಾಜ್ಯದ 28 ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬುಧವಾರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ತಿಳಿಸಿದರು.
ಜಿಲ್ಲೆಯ ಸಾಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಹೆಸರು ಇಲ್ಲವಾಗಿದೆ. ಆದರೆ ನಾಳೆ (ಬುಧವಾರ) ಬಿಡುಗಡೆಯಾಗುವ ಎರಡನೇ ಪಟ್ಟಿಯಲ್ಲಿ ರಾಜ್ಯದ 28 ಲೋಕಸಭಾ ಅಭ್ಯರ್ಥಿಗಳ ಹೆಸರು ಇರಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತನ ಕೇಸನ್ನೇ ಮುಚ್ಚಿ ಹಾಕಿದ್ದರು: ಸಿಎಂ
Advertisement
Advertisement
ದೆಹಲಿಯಲ್ಲಿ ನಾಳೆ ಚುನಾವಣಾ ಸಮಿತಿ ಮೀಟಿಂಗ್ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳ ಫೈನಲ್ ಮಾಡುವ ಮೀಟಿಂಗ್ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ತೀರ್ಮಾನ ಆಗಲಿದೆ ಎಂದು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಪಟ್ಟಿ ಬಿಡುಗಡೆಯ ಬಗ್ಗೆ ಪ್ರಧಾನಿ ಮೋದಿ (Narendra Modi) ಹಾಗೂ ಗೃಹ ಸಚಿವ ಅಮಿತ್ ಶಾ (Amitshah) ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
Advertisement
ಇದೇ ವೇಳೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದವರ ಎಫ್ಎಸ್ಎಲ್ ವರದಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ ಆರೋಪಿಗಳ ವಿರುದ್ಧ ಯಾರು ಕ್ರಮ ಕೈಗೊಳ್ಳುತ್ತಿಲ್ಲ ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳಲಿದೆ ಎಂದರು.