ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

Public TV
1 Min Read
CT Ravi

– ಸುಮಲತಾ ಸೇರಿ ಹಲವು ಪ್ರಮುಖರಿಗೆ ಕೈ ತಪ್ಪಿದ ಟಿಕೆಟ್‌

ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ (Vidhan Parishad Elections) ಹಿನ್ನೆಲೆಯಲ್ಲಿ ಬಿಜೆಪಿ ಸಿ.ಟಿ ರವಿ ಸೇರಿ ಮೂವರು ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ.

ಪರಿಷತ್‌ ಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ ರವಿ (CT Ravi), ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹಾಗೂ ಮಾಜಿ ಶಾಸಕ ಎಂ.ಜಿ ಮುಳೆ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಸೋಮವಾರ (ಜೂ. 3) ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾದ ಹಿನ್ನೆಲೆಯಲ್ಲಿ ಇಂದು ಅಭ್ಯರ್ಥಿಗಳ (BJP Candidates) ಪಟ್ಟಿ ಬಿಡುಗಡೆ ಮಾಡಿದೆ.

ಹೈಕಮಾಂಡ್‌ ಕೋಟಾದಿಂದ ಸಿ.ಟಿ ರವಿ, ರಾಜ್ಯ ಬಿಜೆಪಿ ಕೋಟಾದಿಂದ ಎನ್. ರವಿಕುಮಾರ್ ಹಾಗೂ ಆರ್‌ಎಸ್‌ಎಸ್‌ ಕೋಟಾದ ಅಡಿಯಲ್ಲಿ ಮಾರುತಿರಾವ್ ಗೋವಿಂದರಾವ್ ಮುಳೆ (ಎಂ.ಜಿ ಮುಳೆ) ಅವರಿಗೆ ಟಿಕೆಟ್‌ ನೀಡಲಾಗಿದೆ. ಇದನ್ನೂ ಓದಿ: ವಿಧಾನಸಭೆ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ – 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ

ಮಾಜಿ ಶಾಸಕರೂ ಆಗಿರುವ ಎಂ.ಜಿ ಮುಳೆ ಮರಾಠ ಸಮುದಾಯದ ಪ್ರಭಾವಿ ನಾಯಕರೂ ಆಗಿದ್ದಾರೆ. ಈ ಮೊದಲು ಜೆಡಿಎಸ್‌ನಲ್ಲಿ ಶಾಸಕರಾಗಿದ್ದ ಮುಳೆ ಕಳೆದ ಬಸವಕಲ್ಯಾಣ ಉಪಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಸಾದಲಮ್ಮ ದೇವಿಯ ಮೊರೆ ಹೋದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

SUMALATHA

ಸುಮಲತಾಗೆ ಟಿಕೆಟ್‌ ಮಿಸ್‌:
ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡ ಸಂಸದೆ ಸುಮಲತಾ ಅವರಿಗೆ ಪರಿಷತ್‌ನಲ್ಲಿ ಟಿಕೆಟ್‌ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿತ್ತು. ಆದ್ರೆ ಕೊನೇ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿದೆ. ಇದರೊಂದಿಗೆ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಎನ್.ಮಹೇಶ್ ಅವರಿಗೂ ಟಿಕೆಟ್‌ ಕೈತಪ್ಪಿದೆ.

Share This Article