ನವದೆಹಲಿ: ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ 162 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಈಗ ವಿಶ್ವದೆಲ್ಲೆಡೆ ಹರುಡುತ್ತಿದ್ದು ತನ್ನ ಕರಾಳತೆಯನ್ನು ಪ್ರದರ್ಶಿಸುತ್ತಿದೆ. ಈವರೆಗೆ ಸೋಂಕಿಗೆ 7,171 ಮಂದಿ ಬಲಿಯಾಗಿದ್ದಾರೆ.
ಒಟ್ಟು 162 ರಾಷ್ಟ್ರ ಹಾಗೂ ಪ್ರಾಂತ್ಯಗಳಲ್ಲಿ ಕೊರೊನಾ ವೈರಸ್ ಹರಡಿದ್ದು, ಈವರೆಗೆ ಸುಮಾರು 1,82,605 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಅಲ್ಲದೇ ಚೀನಾದಲ್ಲಿ 3,226 ಮಂದಿ ಸೇರಿದಂತೆ ವಿಶ್ವದೆಲ್ಲೆಡೆ ಒಟ್ಟು 7,171 ಮಂದಿ ಕೊರೊನಾ ಸೋಂಕು ತಗುಲಿ ಜೀವ ಕಳೆದುಕೊಂಡಿದ್ದಾರೆ. ಸುಮಾರು 79,881 ಮಂದಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ 95,546 ಮಂದಿ ಸೋಂಕಿನಿಂದ ಬಳಲುತ್ತಿದ್ದು, ಅವರಲ್ಲಿ 6,163 ಮಂದಿ ಸ್ಥಿತಿ ಚಿಂತಾಜನಕವಾಗಿದೆ.
Advertisement
Karnataka: A 20 year-old woman with travel history to the UK and a 60 year-old person, a contact of the deceased Kalaburagi COVID-19 patient, have tested positive. Both are admitted in designated isolation hospital#Coronavirus https://t.co/F09FUz00at
— ANI (@ANI) March 17, 2020
Advertisement
ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್‍ಗೆ ಈವರೆಗೆ 129 ಮಂದಿ ತುತ್ತಾಗಿದ್ದು, 13 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 114 ಮಂದಿ ಕೊರೊನಾದಿಂದ ಬಳಳುತ್ತಿದ್ದಾರೆ. ಈಗಾಗಲೇ ಕೊರೊನಾಗೆ ಕರ್ನಾಟಕದ ಕಲಬುರ್ಗಿಯ ವೃದ್ಧರೊಬ್ಬರು ಹಾಗೂ ದೆಹಲಿಯ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಕರ್ನಾಟದಲ್ಲಿ ಒಟ್ಟು 10 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 39 ಮಂದಿಗೆ ಸೋಂಕು ತಗುಲಿದೆ ಎಂದು ವರದಿಯಾಗಿದೆ.
Advertisement
Maharashtra: Pune's Shaniwar Wada Fort temporarily closed for public, due to #Coronavirus. Maharashtra has a total of 39 positive cases. pic.twitter.com/ohZUtx5v1z
— ANI (@ANI) March 17, 2020
Advertisement
ಚೀನಾ, ಇಟಲಿ, ಇರಾನ್, ದಕ್ಷಿಣ ಕೊರಿಯಾ, ಸ್ಪೇನ್, ಫ್ರಾನ್ಸ್, ಜರ್ಮನಿ, ಅಮೆರಿಕದಲ್ಲಿ ಕೊರೊನಾ ವ್ಯಾಪಕವಾಗಿ ಹರಡಿದೆ. ಈ ರಾಷ್ಟ್ರಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರ ಗಡಿಯನ್ನು ದಾಟಿದೆ.
1. ಚೀನಾ – ಈವರೆಗೆ ಕೊರೊನಾ ಸೋಂಕಿಗೆ 80,881 ಮಂದಿ ತುತ್ತಾಗಿದ್ದಾರೆ. ಅವರಲ್ಲಿ 68,688 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, 3,226 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ 8,967 ಮಂದಿ ಕೊರೊನಾದಿಂದ ಬಳಲುತ್ತಿದ್ದು, 3,226 ರೋಗಿಗಳ ಸ್ಥಿತಿ ಗಂಭಿರವಾಗಿದೆ.
2. ಇಟಲಿ – ಸೋಂಕಿಗೆ ಈವರೆಗೆ ಇಟಲಿಯಲ್ಲಿ ಸುಮಾರು 27,980 ಮಂದಿ ತುತ್ತಾಗಿದ್ದು, ಅವರಲ್ಲಿ 2,749 ಮಂದಿ ಚೇತರಿಸಿಕೊಂಡಿದ್ದಾರೆ. 2158 ಮಂದಿ ಮೃತಪಟ್ಟಿದ್ದು, ಪ್ರಸ್ತುತ 23,073 ಮಂದಿ ಕೊರೊನಾದಿಂದ ಬಳಲುತ್ತಿದ್ದರೆ, 1,851 ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ.
3. ಇರಾನ್ – 14,991 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಅವರಲ್ಲಿ 4,996 ಮಂದಿ ಸೊಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 9,142 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದು, 853 ಸೋಂಕಿತರು ಸಾವನ್ನಪ್ಪಿದ್ದಾರೆ.
4. ಸ್ಪೇನ್ – 9,942 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 530 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 9,070 ರೋಗಿಗಳು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, 342 ಮಂದಿ ಬಲಿಯಾಗಿದ್ದಾರೆ.
5. ದಕ್ಷಿಣ ಕೊರಿಯಾ – 8,320 ಮಂದಿಗೆ ಸೋಂಕು ತಗುಲಿತ್ತು. ಆದರೆ ಅವರಲ್ಲಿ 1,401 ರೋಗಿಗಳು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. 81 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಪ್ರಸ್ತುತ 6,838 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
6. ಜರ್ಮನಿ – 7,272 ಮಂದಿಯಲ್ಲಿ ಕಾಣಿಕೊಂಡ ಕೊರೊನಾ ಸೋಂಕಿನಿಂದ 67 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸದ್ಯ 17 ಮಂದಿ ಬಲಿಯಾಗಿದ್ದು, ಪ್ರಸ್ತುತ 7,188 ರೋಗಿಗಳು ಕೊರೊನಾದಿಂದ ನರಳುತ್ತಿದ್ದಾರೆ.
7. ಫ್ರಾನ್ಸ್ – 6,633 ಮಂದಿ ಕೊರೊನಾಗೆ ತುತ್ತಾಗಿದ್ದರು. ಅವರಲ್ಲಿ 12 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಸದ್ಯ 6,473 ಮಂದಿ ಸೋಂಕಿನಿಂದ ಬಳಲುತ್ತಿದ್ದು, 148 ಮಂದಿ ಜೀವ ಕಳೆದುಕೊಂಡಿದ್ದಾರೆ.
8. ಅಮೆರಿಕ – ಯುಎಸ್‍ಎನಲ್ಲಿ ಕೊರೊನಾಗೆ 91 ಮಂದಿ ಬಲಿಯಾಗಿದ್ದಾರೆ. 4,704 ಮಂದಿಯಲ್ಲಿ ಕಾಣಿಸಿಕೊಂಡ ಸೋಂಕಿನಿಂದ 74 ಮಂದಿ ಗುಣಮುಖರಾಗಿದ್ದಾರೆ. ಸದ್ಯ 4,539 ರೋಗಿಗಳು ಸೋಂಕಿನಿಂದ ಬಳಲುತ್ತಿದ್ದಾರೆ.
9. ಪಾಕಿಸ್ತಾನ – ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿಯೂ ಕೊರೊನಾ ವೈರಸ್ ಹರಡಿದೆ. ಈವರೆಗೆ 184 ಮಂದಿ ಸೋಂಕಿಗೆ ತುತ್ತಾಗಿದ್ದು, ಇಬ್ಬರು ಚೇತರಿಸಿಕೊಂಡಿದ್ದಾರೆ.