ರಾಜ್ಯಕ್ಕೆ ಮೋದಿ: ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಬದಲಾವಣೆ – ಪಟ್ಟಿ ಹೀಗಿದೆ..

Public TV
2 Min Read
NARENDRA MODI 1

ಮೈಸೂರು: 8ನೇ ಅಂತಾರಾಷ್ಟ್ರೀಯ ಯೋಗದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಭೇಟಿ ನೀಡುತ್ತಿದ್ದು, ಮೋದಿಯವರು ಪಾಲ್ಗೊಳ್ಳಬೇಕಿದ್ದ ಕಾರ್ಯಕ್ರಮಗಳ ಪಟ್ಟಿಯನ್ನು ಈ ಹಿಂದೆ ಬಿಡುಗಡೆಗೊಳಿಸಲಾಗಿತ್ತು. ಇದೀಗ ಈ ಕಾರ್ಯಕ್ರಮದ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

modi 4

ಜೂನ್ 20 ಮತ್ತು 21ರಂದು ಎರಡು ದಿನ ಮೋದಿ ಬೆಂಗಳೂರು ಮತ್ತು ಮೈಸೂರಿನ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಜೂ. 20ರಂದು ಮಧ್ಯಾಹ್ನ 11.55ಕ್ಕೆ ಬೆಂಗಳೂರು ಯಲಹಂಕ ವಾಯುನೆಲೆಗೆ ಆಗಮಿಸಿ ನಂತರ ಮಧ್ಯಾಹ್ನ 12:30ಕ್ಕೆ ಇಂಡಿಯನ್ ಇನ್ಸ್‌ಟ್ಯೂಟ್ ಆಫ್ ಸೈನ್ಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ಸೈಕಲ್‌ನಿಂದ ಬಿದ್ದ ವಿಶ್ವದ ದೊಡ್ಡಣ್ಣ

mys palace app

ಮಧ್ಯಾಹ್ನ 3.35ಕ್ಕೆ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಮಾಡಲಿದ್ದಾರೆ. ಜೊತೆಗೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. ಸಂಜೆ 5 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸಿ ಸಂಜೆ 6 ಗಂಟೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನಕ್ಕೆ ತಲುಪಲಿದ್ದಾರೆ.

MYS CHAMUNDI HILLS a

ಕೇಂದ್ರ ಯೋಜನಗಳ ಫಲಾನುವಿಗಳೊಂದಿಗೆ ಸಂವಾದ ನಡೆಸಿ, ಬಳಿಕ ಸಂಜೆ 7:30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠದ ಆವರಣದಲ್ಲಿ ವೇದ ಪಾಠಶಾಲೆ ಕಟ್ಟಡ ಲೋಕಾರ್ಪಣೆ ಮಾಡಲಿದ್ದಾರೆ. ನಂತರ ರಾತ್ರಿ 8:15ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಕೇವಲ 1 ಗಂಟೆಯಲ್ಲಿ 3,182 ಪುಷ್‌-ಅಪ್‌ ಮಾಡಿ ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಮಾಡಿದ ಭೂಪ!

ಬಳಿಕ ರ‍್ಯಾಡಿಷನ್ ಬ್ಲೂ ಹೋಟೆಲ್‍ನಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. ಜೂ.21ರಂದು ಬೆಳಗ್ಗೆ 6.30ಕ್ಕೆ ಮೈಸೂರು ಅರಮನೆ ಆವರಣಕ್ಕೆ ಆಗಮಿಸಿ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸ್ವತಃ ಮೋದಿ ಅವರೇ ಯೋಗಾಭ್ಯಾಸ ಮಾಡುವ ಮೂಲಕ ಅಂತಾರಾಷ್ಟ್ರೀಯ ಯೋಗ ದಿನ ಕುರಿತಂತೆ ಸಂದೇಶ ಸಾರಲಿದ್ದಾರೆ. ಎಲ್ಲ ಕಾರ್ಯಕ್ರಮಗಳ ಮುಕ್ತಾಯದ ನಂತರ ಬೆಳಗ್ಗೆ 9.25ಕ್ಕೆ ಮೈಸೂರಿನಿಂದ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *