ನವದೆಹಲಿ: ನೀಟ್‍ಯುಜಿ 2024 (NEET UG 2024) ಮರುಪರೀಕ್ಷೆಯ ಮನವಿಯನ್ನು ಸುಪ್ರೀಂ ಕೋಟ್ (Supreme Court) ತಿರಸ್ಕರಿಸಿದೆ. ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಗೆ ಸಾಕ್ಷ್ಯಾಧಾರಗಳಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರಿದ್ದ ತ್ರಿಸದಸ್ಯ ಪೀಠವು ಈ ಅರ್ಜಿಯನ್ನು ವಿಚಾರಣೆ ನಡೆಸಿತು. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಅರ್ಜಿದಾರರು ಆರೋಪಿಸಿದಂತೆ ಪ್ರಶ್ನೆ ಪತ್ರಿಕೆಯ ವ್ಯಾಪಕ ಸೋರಿಕೆಯನ್ನು ತೋರಿಸಲು ತನ್ನ ಮುಂದೆ ಇರುವ ಸಾಕ್ಷ್ಯಗಳು ಸಾಕಾಗುವುದಿಲ್ಲ ಎಂದು ಪೀಠ ಹೇಳಿದೆ.
Advertisement
ಸುಪ್ರೀಂ ಆದೇಶದಲ್ಲಿ ಏನಿದೆ?
ನೀಟ್‍ಯುಜಿ 2024 2024 ರ ರದ್ದತಿಗೆ ಆದೇಶ ನೀಡುವುದು ನ್ಯಾಯಸಮ್ಮತವಲ್ಲ. ಪರೀಕ್ಷೆಯ ಫಲಿತಾಂಶವು ದುರ್ಬಲವಾಗಿದೆ ಅಥವಾ ಪರೀಕ್ಷೆಯ ವ್ಯವಸ್ಥಿತ ಉಲ್ಲಂಘನೆಯಾಗಿದೆ ಎಂಬ ತೀರ್ಮಾನಕ್ಕೆ ಕಾರಣವಾಗಲು ದಾಖಲೆಯಲ್ಲಿ ಸಾಕಷ್ಟು ಸಾಕ್ಷಿಗಳ ಕೊರತೆ ಇದೆ.
Advertisement
ವಿವಾದಾತ್ಮಕ ಪ್ರಶ್ನೆಗೆ ಸರಿಯಾದ ಉತ್ತರವನ್ನು ದೆಹಲಿಯ ಐಐಟಿ ಸಮಿತಿಯಿಂದ ಕೋರ್ಟ್ ಮಾಹಿತಿ ಪಡೆದು ಒಪ್ಪಿಕೊಂಡಿದೆ. ಈ ಆಧಾರದ ಮೇಲೆ ಫಲಿತಾಂಶಗಳನ್ನು ಮರು ಲೆಕ್ಕಾಚಾರ ಮಾಡಲು ಎನ್‍ಟಿಎಗೆ ನಿರ್ದೇಶನ ನೀಡಲಾಗಿದೆ.
Advertisement
Advertisement
ವೈಯಕ್ತಿಕ ಕುಂದುಕೊರತೆಗಳನ್ನು ಹೊಂದಿರುವ ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು (ಯಾವುದಾದರೂ ಇದ್ದರೆ) ಸುಪ್ರೀಂ ಕೋರ್ಟ್‍ನಿಂದ ಹಿಂತೆಗೆದುಕೊಂಡ ನಂತರ ಹೈಕೋರ್ಟ್‍ನ್ನು ಸಂಪರ್ಕಿಸಬಹುದು.
ನೀಟ್‍ಯುಜಿಯನ್ನು ಬಲಪಡಿಸಲು ಮತ್ತು ಭವಿಷ್ಯದಲ್ಲಿ ಅಂತಹ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ರಚಿಸಿರುವ ಏಳು ಸದಸ್ಯರ ತಜ್ಞರ ಸಮಿತಿಯು ನ್ಯಾಯಾಲಯದಿಂದ ಹೆಚ್ಚಿನ ನಿರ್ದೇಶನಗಳನ್ನು ನೀಡಬಹುದು.
ಪದವಿಪೂರ್ವ ಕೋರ್ಸ್‍ಗಳಿಗೆ ದೇಶಾದ್ಯಂತ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶವು ನೀಟ್‍ಯುಜಿ ಸ್ಕೋರ್ ಅನ್ನು ಆಧರಿಸಿದೆ.
ಈ ವಿಷಯದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ಇನ್ನೂ ಮುಕ್ತಾಯವಾಗಬೇಕಿದೆ ಎಂದು ನ್ಯಾಯಾಲಯ ಗಮನಿಸಿದೆ. ತನಿಖೆಯಲ್ಲಿ ಹೆಚ್ಚು ಕಳಂಕಿತ ಅಭ್ಯರ್ಥಿಗಳು ಅಥವಾ ಯಾವುದೇ ಅವ್ಯವಹಾರದ ಫಲಾನುಭವಿಗಳು ಕಂಡುಬಂದರೆ, ಅಂತಹ ವಿದ್ಯಾರ್ಥಿಯು ಕಾಲೇಜು ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದರೂ ಯಾವುದೇ ಹಂತದಲ್ಲಿ ಕ್ರಮ ಕೈಗೊಳ್ಳಬಹುದು ಎಂದು ಪೀಠವು ತಿಳಿಸಿದೆ.
ವಂಚನೆಯ ಭಾಗವಾಗಿರುವುದು ಅಥವಾ ದುಷ್ಕøತ್ಯಗಳ ಫಲಾನುಭವಿ ಎಂದು ಬಹಿರಂಗಗೊಂಡ ಯಾವುದೇ ವಿದ್ಯಾರ್ಥಿಯು ಪ್ರವೇಶದ ಮುಂದುವರಿಕೆಯಲ್ಲಿ ಯಾವುದೇ ಸ್ಥಾಪಿತ ಹಕ್ಕನ್ನು ಪಡೆಯಲು ಅರ್ಹರಾಗಿರುವುದಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.
ಏನಿದು ಪ್ರಕರಣ?
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಮೇ 5 ರಂದು ನಡೆಸಿದ ಪರೀಕ್ಷೆಯಲ್ಲಿ ಸುಮಾರು 24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮತ್ತು 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಿದ್ದು ವಿವಾದಕ್ಕೆ ಕಾರಣವಾಗಿ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆದಿತ್ತು. ಇದಾದ ಬಳಿಕ ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದ್ದು, ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಇದರ ನಡುವೆ ಮರು ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿತ್ತು.