ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬರುತ್ತಿರುವ ಸುದ್ದಿ ಕೇಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಅಭಿಮಾನಿ ಓಡೋಡಿ ಬಂದು ಭೇಟಿ ಆಗಿದ್ದಾನೆ.
9 ವರ್ಷದ ತ್ರಿಷಾರ್ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಯಾಗಿದ್ದು ಹೆಬ್ಬಾಳ ಬಳಿಯ ಆಸ್ಟರ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದೇ ವೇಳೆ ಸಿದ್ದರಾಮಯ್ಯ ಅವರು ಶಾಸಕ ನಾಗೇಂದ್ರ ಅವರ ಆರೋಗ್ಯವನ್ನು ವಿಚಾರಿಸಲು ಆಸ್ಟರ್ ಆಸ್ಪತ್ರೆಗೆ ಆಗಮಿಸಿದ್ದರು.
ಆಸ್ಪತ್ರೆಗೆ ಸಿದ್ದರಾಮಯ್ಯ ಅವರು ಬಂದ ವಿಷಯ ತಿಳಿದು ತ್ರಿಷಾರ್ ತನ್ನ ರೂಮಿನಿಂದ ಶಾಸಕ ನಾಗೇಂದ್ರ ಅವರು ಇದ್ದ ರೂಮಿಗೆ ಓಡೋಡಿ ಬಂದಿದ್ದಾನೆ. ಬಳಿಕ ಸಿದ್ದರಾಮಯ್ಯ ಅವರ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಕೆಲ ಹೊತ್ತು ಕಾಲ ಕಳೆದು ಖುಷಿಯಾಗಿದ್ದಾನೆ.
ಲಘು ಹೃದಯಾಘಾತದಿಂದ ನಾಗೇಂದ್ರ ಅವರು ಭಾನುವಾರ ಬೆಂಗಳೂರಿನ ಆಸ್ಟರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹೃದಯಾಘಾತದ ನಂತರ ವೈದ್ಯರು ನಾಗೇಂದ್ರ ಅವರಿಗೆ ಸ್ಟಂಟ್ ಅಳವಡಿಸಿದ್ದು, ವೈದ್ಯರ ಸೂಚನೆ ಮೇರೆಗೆ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ.