ರಾಯಚೂರು: ಜಿಲ್ಲೆಯ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ತುಮಕೂರಿನ ಕಲಾವಿದರೊಬ್ಬರು ವಿಶಿಷ್ಟ ರೀತಿಯಲ್ಲಿ ಮೃತ ವಿದ್ಯಾರ್ಥಿನಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಪಂಚ ಕುಂಚ ಕಲಾವಿದ ತುಮಕೂರಿನ ಪರಮೇಶ್ ಗುಬ್ಬಿ ಮೃತ ವಿದ್ಯಾರ್ಥಿನಿಯ ಚಿತ್ರ ಬಿಡಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ವಿದ್ಯಾರ್ಥಿನಿ ಅಸಹಜ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ದೇಶದೆಲ್ಲೆಡೆ ಕೂಗೂ ಜೋರಾಗಿದೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳು ಭಾಗಿಯಾಗಿದ್ದಾರಾ ಎನ್ನುವುದು ಬೆಳಕಿಗೆ ಬರಬೇಕು. ಈ ರೀತಿಯ ಘಟನೆಗಳು ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕಲಾವಿದ ಪರಮೇಶ್ ಆಗ್ರಹಿಸಿದ್ದಾರೆ. ಪರಮೇಶ್ ಅವರು ಚಿತ್ರ ಬಿಡಿಸಿದ ವಿಡಿಯೋ ಹಾಗೂ ಅವರು ಸ್ವತಃ ಮಾತನಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Advertisement
Advertisement
ವಿಡಿಯೋದಲ್ಲಿ ಪರಮೇಶ್ ಗುಬ್ಬಿ, “ಸರ್ಕಾರ ಈ ಕ್ರೂರಿಗಳಿಗೆ ಶಿಕ್ಷೆ ಕೊಡಬೇಕು. ಅಲ್ಲದೇ ಆ ಆರೋಪಿ ಜೊತೆ ಇದ್ದ ಉಳಿದ ಸಹಚರರನ್ನು ಹಿಡಿದು ಶಿಕ್ಷೆ ಕೊಡಿಸಿ ವಿದ್ಯಾರ್ಥಿನಿಗೆ ತಕ್ಕ ನ್ಯಾಯ ಒದಗಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ಇದೇ ರೀತಿ ಹೆಣ್ಣು ಮಕ್ಕಳ ಮೇಲೆ ತುಂಬಾ ತೊಂದರೆ ಆಗುತ್ತಿದೆ. ಈ ರೀತಿ ಮಾಡಿದವರನ್ನು ಸರ್ಕಾರ ದೊಡ್ಡ ಶಿಕ್ಷೆ ಕೊಟ್ಟರೆ ಈ ರೀತಿ ಯಾರು ಮಾಡುವುದಿಲ್ಲ ಎಂಬುದು ನನ್ನ ಅನಿಸಿಕೆ” ಎಂದು ಹೇಳಿದ್ದಾರೆ.
Advertisement
Advertisement
ಸದ್ಯ ರಾಜ್ಯಾದ್ಯಂತ ವಿದ್ಯಾರ್ಥಿಗಳು ಹಾಗೂ ವಿವಿಧೆಡೆಯಿಂದ ಆಕ್ರೋಶ ಹೆಚ್ಚಾದ ಹಿನ್ನೆಲೆಯಲ್ಲಿ ಕೊಲೆ ಮತ್ತು ಅತ್ಯಾಚಾರ ಪ್ರಕರಣ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆಂದೋಲನ ತೀವ್ರ ಸ್ವರೂಪ ಪಡೆಯುತ್ತಿರುವುದರಿಂದ ರಾಯಚೂರು ಡಿವೈಎಸ್‍ಪಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ಏನಿದು ಪ್ರಕರಣ?
ಏಪ್ರಿಲ್ 16 ರಂದು ಮೃತ ವಿದ್ಯಾರ್ಥಿನಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು. ಪೊಲೀಸರು ಡೆತ್‍ನೋಟ್ ನೋಡಿ ಇದು ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿದ್ದರು. ಬಳಿಕ ಮೃತ ಮಧು ತಾಯಿ ಇದು ಕೊಲೆಯಲ್ಲ. ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಮೃತ ವಿದ್ಯಾರ್ಥಿನಿಯ ಗೆಳೆಯ ಸುದರ್ಶನ್‍ನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
https://www.youtube.com/watch?v=1ol72NiFAPg