ಲಂಡನ್: ಬ್ರಿಟನ್‌ನಲ್ಲಿ (United Kingdom) ರಾಜಕೀಯ ಬಿಕ್ಕಟ್ಟು ಎದುರಾಗಿದ್ದು, ಪ್ರಧಾನಿ ಲಿಜ್ ಟ್ರಸ್ (Liz Truss) ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ವಾರಗಳಲ್ಲಿ ಅವರು ರಾಜೀನಾಮೆ ಘೋಷಿಸಿದ್ದಾರೆ.
ಆರ್ಥಿಕ ಮತ್ತು ಅಂತಾರಾಷ್ಟ್ರೀಯ ಅಸ್ಥಿರತೆಯ ಸಮಯದಲ್ಲಿ ತಾನು ಅಧಿಕಾರಕ್ಕೆ ಬಂದಿದ್ದೆ. ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಉತ್ತರಾಧಿಕಾರಿ ಆಯ್ಕೆಯಾಗುವವರೆಗೂ ನಾನು ಪ್ರಧಾನಿಯಾಗಿಯೇ ಮುಂದುವರಿಯುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಿಷಿ ಸುನಾಕ್‌ಗೆ ಸಿಗುತ್ತಾ ಬ್ರಿಟನ್ ಪ್ರಧಾನಿ ಹುದ್ದೆ?
Advertisement
Advertisement
ಬ್ರಿಟನ್ ಪ್ರಧಾನಿ ಲಿಜ್ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಅವರ ಸರ್ಕಾರದಿಂದ ಒಬ್ಬೊಬ್ಬರೇ ಅಧಿಕಾರದಿಂದ ಹೊರ ನಡೆದರು. ಈಚೆಗಷ್ಟೇ ಹಣಕಾಸು ಸಚಿವ ಸ್ಥಾನಕ್ಕೆ ಕ್ವಾಸಿ ಕ್ವಾರ್ಟೆಂಗ್ ರಾಜೀನಾಮೆ ನೀಡಿದ್ದರು. ಬುಧವಾರ ಕೂಡ ಗೃಹ ಸಚಿವೆ, ಭಾರತೀಯ ಮೂಲದ ಸುಯೆಲ್ಲಾ ಬ್ರೇವರ್‌ಮನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Advertisement
ಬಲಪಂಥೀಯ ಆರ್ಥಿಕತೆಯ ಕಾರ್ಯಸೂಚಿಯಿಂದ ಪ್ರಧಾನಿ ಟ್ರಸ್ ಹಿಂದೆ ಸರಿಯುತ್ತಿದ್ದಂತೆಯೇ ಅವರು ಕೂಡ ಅಧಿಕಾರದಲ್ಲಿ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಹೇಳಲಾಗಿತ್ತು. ಅದರಂತೆಯೇ ಟ್ರಸ್ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಅಗ್ನಿ ಅವಘಡದಿಂದ ಕುಸಿದ ಮಸೀದಿಯ ಗುಮ್ಮಟ- ವೀಡಿಯೋ ವೈರಲ್
Advertisement
ಪ್ರಧಾನಿ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ ನೀಡಿದ ಬಳಿಕ ನಡೆದ ಚುನಾವಣೆಯಲ್ಲಿ ಲಿಜ್ ಟ್ರಸ್ ಮತ್ತು ಭಾರತ ಮೂಲದ ರಿಷಿ ಸುನಾಕ್ ನಡುವೆ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆದಿತ್ತು. ಕೊನೆಗೆ ಸುನಕ್ ಮಣಿಸಿ ಟ್ರಸ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದರು.