ಲಂಡನ್: ಬ್ರಿಟನ್‍ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಯಾಗಿದ್ದಾರೆ.
Advertisement
ಬೋರಿಸ್ ಜಾನ್ಸನ್ ಬ್ರಿಟನ್ ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬ ಪ್ರಶ್ನೆ ಮನೆಮಾಡಿತ್ತು. ಬಳಿಕ ಭಾರತ ಮೂಲದ ರಿಷಿ ಸುನಾಕ್ ರಕ್ಷಣಾ ಕಾರ್ಯದರ್ಶಿ ಬೆನ್ ವ್ಯಾಲೇಸ್, ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್, ಮಾಜಿ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿದ್ದರು. ಇವರಲ್ಲಿ ರಿಷಿ ಸುನಕ್ ಮತ್ತು ಲಿಜ್ ಟ್ರಸ್ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು
Advertisement
Advertisement
ಅಂತಿಮ ಸುತ್ತಿನಲ್ಲಿ ರಿಷಿ ಸುನಾಕ್ ಮತ್ತು ಲಿಜ್ ಟ್ರಸ್ ನಡುವೆ ಬಾರಿ ಪೈಪೋಟಿ ಇತ್ತು. ಅಂತಿಮವಾಗಿ ಲಿಜ್ ಟ್ರಸ್ 81,326 ಮತಗಳನ್ನು ಪಡೆದು ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಬ್ರಿಟನ್‍ನ ಮೂರನೇ ಮಹಿಳಾ ಪ್ರಧಾನಿಯಾಗಿ ಲೀಜ್ ಟ್ರಸ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ 60,399 ಮತಗಳನ್ನು ಪಡೆದು ಪರಾಭವಗೊಂಡರು. ಇದನ್ನೂ ಓದಿ: ನಮಗೆ ದ್ರೋಹ ಬಗೆದ ಉದ್ಧವ್ ಠಾಕ್ರೆಗೆ ಪಾಠ ಕಲಿಸಬೇಕು: ಅಮಿತ್ ಶಾ ಗುಡುಗು
Advertisement
ಪರಾಭವಗೊಂಡ ರಿಷಿ ಸುನಕ್ ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿಯವರ ಪುತ್ರಿ ಅಕ್ಷತಾ ಮೂರ್ತಿಯ ಪತಿಯಾಗಿದ್ದು, ಬ್ರಿಟನ್‍ನಲ್ಲಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದರು. ಇವರನ್ನು ಬೋರಿಸ್ ಜಾನ್ಸನ್ 2020ರಲ್ಲಿ ಮೊದಲ ಬಾರಿಗೆ ಪೂರ್ಣ ಕ್ಯಾಬೆನೆಟ್ ಸ್ಥಾನವನ್ನು ನೀಡಿದ್ದರು. ಹಣಕಾಸು ಸಚಿವರಾಗಿ ಬೋರಿಸ್ ಜಾನ್ಸನ್ ಸರ್ಕಾರದಲ್ಲಿ ರಿಷಿ ಸುನಾಕ್ ಕಾರ್ಯನಿರ್ವಹಿಸಿದ್ದರು.
ಆ ಬಳಿಕ ಬೋರಿಸ್ ಜಾನ್ಸನ್ ವಿರುದ್ಧ ಭಿನ್ನಾಭಿಪ್ರಾಯದಿಂದ ಸಾಜಿದ್ ಜಾವೇಜ್ ರಾಜೀನಾಮೆ ನೀಡಿದ ಬೆನ್ನಲ್ಲೇ ರಿಷಿ ಸುನಕ್ ಕೂಡ ಹಣಕಾಸು ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಪ್ರಧಾನಿ ಹುದ್ದೆಗೆ ಸ್ಫರ್ಧಿಸಿ ಅಂತಿಮ ಸುತ್ತಿಗೆ ಆಯ್ಕೆಗೊಂಡಿದ್ದರು. ಇದನ್ನೂ ಓದಿ: ಶಾಸಕ ಜಮೀರ್ ಕಚೇರಿಯಲ್ಲಿ ಅದ್ಧೂರಿ ಗಣೇಶೋತ್ಸವ..!
ಪ್ರಧಾನಿ ಬೋರಿಸ್ ಜಾನ್ಸನ್ ಜುಲೈ 7 ರಂದು ಕನ್ಸರ್ವೇಟಿವ್ ಪಕ್ಷದ ನಾಯಕತ್ವವನ್ನು ತ್ಯಜಿಸುವುದಾಗಿ ಘೋಷಿಸಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದೀಗ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆಗೊಂಡಿದ್ದಾರೆ.