ಬಳ್ಳಾರಿ: ಶಾಲೆಯಲ್ಲಿ ನೀಡಿದ ಮಧ್ಯಾಹ್ನದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಗದ್ದಿಕೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪ್ರೌಢಶಾಲೆಯಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದು, ಮಧ್ಯಾಹ್ನ ಬಿಸಿಯೂಟ ಸೇವಿಸುತ್ತಿದಂತೆ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. ಕೂಡಲೇ ವಿದ್ಯಾಥಿಗಳನ್ನು ಸ್ಥಳೀಯ ಹಗರಿಬೊಮ್ಮನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಸದ್ಯ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
Advertisement
Advertisement
ಶಾಲೆಯಲ್ಲಿಯೇ ತಯಾರಿಸಲಾಗಿದ್ದ ಊಟದಲ್ಲಿ ಹಲ್ಲಿ ಬಿದ್ದ ಕಾರಣ ಈ ಅವಘಡ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಯಾವುದೇ ಶಾಲೆಯಲ್ಲಿ ಬಿಸಿಯೂಟ ತಯಾರದ ಬಳಿಕ ಶಾಲೆ ಮುಖ್ಯ ಶಿಕ್ಷಕರು ಸೇವಿಸಿದ ಬಳಿಕ ವಿದ್ಯಾರ್ಥಿಗಳು ಸೇವನೆ ಮಾಡಬೇಕು. ಆದರೆ ನಿಯಮವನ್ನು ಶಿಕ್ಷಕರು ಪಾಲಿಸಿಲ್ಲ. ಒಂದೊಮ್ಮೆ ನಿಯಮ ಪಾಲನೆ ಮಾಡಿದ್ದಾರೆ ಇಷ್ಟು ಮಕ್ಕಳು ಆಸ್ವಸ್ಥರಾಗುವುದನ್ನು ತಪ್ಪಿಸುವ ಅವಕಾಶವಿತ್ತು ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv