ಮಂಡ್ಯ: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ (Lizard) ಬಿದ್ದಿರುವ ಶಂಕೆ ವ್ಯಕ್ತವಾದ ಹಿನ್ನೆಲೆ 67 ವಿದ್ಯಾರ್ಥಿಗಳನ್ನು ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದಲ್ಲಿ ನಡೆದಿದೆ.
ರಾವಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ(Government school) ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿಯ ತಟ್ಟೆಯಲ್ಲಿ ಹಲ್ಲಿ ಬಾಲದಂತಿರುವ ಪದಾರ್ಥ ಪತ್ತೆಯಾಗಿದೆ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ ಉಂಟಾಗಿದೆ. ತಕ್ಷಣ ಎಚ್ಚೆತ್ತ ಶಾಲಾ ಸಿಬ್ಬಂದಿ, ಊಟ ಸೇವಿಸಿದ್ದ 67 ಮಕ್ಕಳನ್ನು ಮಳವಳ್ಳಿ ತಾಲೂಕು ಆಸ್ಪತ್ರೆಗೆ ಕರೆತಂದು ವೈದ್ಯಕೀಯ ತಪಾಸಣೆ ನಡೆಸಿದ್ದಾರೆ.
ವೈದ್ಯರು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ವಿದ್ಯಾರ್ಥಿಯಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಮಕ್ಕಳಿಗಿಂತ ಮೊದಲು ಊಟ ಮಾಡಿದ್ದ ಅಡುಗೆ ಸಿಬ್ಬಂದಿಗೂ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೂ ಮುಂಜಾಗೃತಾ ಕ್ರಮವಾಗಿ ಮಕ್ಕಳನ್ನು ಆಸ್ಪತ್ರೆಯಲ್ಲಿ ಇರಿಸಿ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ. ಇದನ್ನೂ ಓದಿ: 10 ಲಕ್ಷ ವರದಕ್ಷಿಣೆಗಾಗಿ ಪತ್ನಿಗೆ ಚಿತ್ರಹಿಂಸೆ – ಕುಕ್ಕರ್‌ನಿಂದ ಹಲ್ಲೆ ಮಾಡಿ ಹತ್ಯೆ
