ನವದೆಹಲಿ: ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ (LK Advani) ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯು ತನ್ನ ಹೇಳಿಕೆಯಲ್ಲಿ ದೃಢಪಡಿಸಿದೆ.
ಏಕಾಏಕಿ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ 96 ವರ್ಷ ವಯಸ್ಸಿನ ಅಡ್ವಾಣಿಯವರನ್ನು ಬುಧವಾರ ತಡರಾತ್ರಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
- Advertisement
ಅಡ್ವಾಣಿಯವರು ವೃದ್ಧಾಪ್ಯ ವಿಭಾಗದ ತಜ್ಞರ ಅಡಿಯಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯನ್ನ ಎತ್ತಿ ಎಸೆದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ
- Advertisement
2024ರ ಮಾರ್ಚ್ 30 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿರುವ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು.