ಜ.22 ರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಬಿಜೆಪಿ ಹಿರಿಯ ನಾಯಕನಿಗೆ ಆಹ್ವಾನ
ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ (Ram Temple) ‘ಪ್ರಾಣ ಪ್ರತಿಷ್ಠೆ’ ಸಮಾರಂಭದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ (LK Advani) ಪಾಲ್ಗೊಳ್ಳಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಬುಧವಾರ ಹೇಳಿದ್ದಾರೆ.
Advertisement
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖಂಡ ಕೃಷ್ಣ ಗೋಪಾಲ್ ಮತ್ತು ರಾಮ್ ಲಾಲ್ ಅವರು ಅಲೋಕ್ ಕುಮಾರ್ ಅವರೊಂದಿಗೆ ಎಲ್‌ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿ ಬುಧವಾರ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಆಹ್ವಾನ
Advertisement
Advertisement
ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠೆ ಸಮಾರಂಭಕ್ಕೆ ಎಲ್‌ಕೆ ಅಡ್ವಾಣಿ ಭೇಟಿ ನೀಡುವ ಸಂದರ್ಭದಲ್ಲಿ ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳು ಮತ್ತು ಇತರ ವ್ಯವಸ್ಥೆಗಳನ್ನು ಒದಗಿಸಲಾಗುವುದು ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
Advertisement
ಜನವರಿ 22 ರಂದು ಭವ್ಯ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಸಮಾರಂಭಕ್ಕೆ ಎಲ್ಲಾ ಸಂಪ್ರದಾಯಗಳ ಸಂತರಿಗೂ ಆಮಂತ್ರಣಗಳನ್ನು ನೀಡಲಾಗಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ನವರು ಬರೋದು ರಾಮನಿಗೂ ಇಷ್ಟವಿಲ್ಲ: ಸಿ.ಟಿ ರವಿ
ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕೆ ಕಾಂಗ್ರೆಸ್ ನಿರಾಕರಿಸಿದೆ. ಕಾಂಗ್ರೆಸ್‌ನ ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಸಮಾರಂಭದ ಆಹ್ವಾನ ತಿರಸ್ಕರಿಸಿದ್ದಾರೆ.