Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಲೋ ನವೀನʼ ಸಿನಿಮಾ – ದೇಸಿ ಸಾಂಗ್ ಪ್ರಯೋಗಕ್ಕೆ ಕರುನಾಡು ಫಿದಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ʻಲೋ ನವೀನʼ ಸಿನಿಮಾ – ದೇಸಿ ಸಾಂಗ್ ಪ್ರಯೋಗಕ್ಕೆ ಕರುನಾಡು ಫಿದಾ!

Cinema

ʻಲೋ ನವೀನʼ ಸಿನಿಮಾ – ದೇಸಿ ಸಾಂಗ್ ಪ್ರಯೋಗಕ್ಕೆ ಕರುನಾಡು ಫಿದಾ!

Public TV
Last updated: November 29, 2025 3:28 pm
Public TV
Share
3 Min Read
Naveen Sajju 2
SHARE

ಗಾಯಕನಾಗಿ ಕನ್ನಡಿಗರ ಮನ ಗೆದ್ದಿರುವ ನವೀನ್ ಸಜ್ಜು (Naveen Sajju) ನಾಯಕನಾಗಿ ನಟಿಸಿರುವ ಮೊದಲ ಚಿತ್ರ ʻಲೋ ನವೀನʼ (Lo Naveena). ಇತ್ತೀಚೆಗೆ ಈ ಚಿತ್ರದ ಕೋಣಾಣೆ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮಾಜಿ ಶಾಸಕರಾದ ಎ.ಮಂಜು, ಪುಟ್ಟರಾಜು, ಅಮರನಾಥ ಗೌಡ, ವಿಶ್ವಾಮಿತ್ರ, ಜಿ.ಟಿ.ಮಾಲ್ ನ ಆನಂದ್, ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಹಾಡು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಅಪ್ಪಟ ಜನಪದ ಶೈಲಿಯ ಈ ಹಾಡನ್ನು ಮೈಸೂರಿನ ಹೆಚ್‌.ಡಿ ಕೋಟೆಯ (HD Kote) ಗ್ರಾಮೀಣ ಪ್ರತಿಭೆಗಳಾದ ಚಮ್ಮಮ್ಮ ಹಾಗೂ ಲಕ್ಷಮ್ಮ ಹಾಡಿದ್ದಾರೆ. ನವೀನ್ ಸಜ್ಜು ಸಹ ಗಾಯನಕ್ಕೆ ಜೊತೆಯಾಗಿದ್ದಾರೆ. ಅನಿವಾಸಿ ಭಾರತೀಯರಾದ ಬೆನ್ ಚಿಕ್ಕಸ್ವಾಮಿ ಅರ್ಪಿಸುವ , ಕೀರ್ತಿಸ್ವಾಮಿ ನಿರ್ಮಿಸಿರುವ ಹಾಗೂ ಧನುರ್ಧಾರಿ ಪವನ್ ನಿರ್ದೇಶನದ “ಲೋ ನವೀನ” ಚಿತ್ರದ ಮೊದಲ ಹಾಡು ಇದ್ದಾಗಿದ್ದು, ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಲಭ್ಯವಿದೆ. ಹಾಡು ಬಿಡುಗಡೆ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

Naveen Sajju 3

ಮೂಲತಃ ಮಳವಳ್ಳಿಯವನಾದ ನಾನು, ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದೆ. ನನ್ನ ಪ್ರತಿಭೆ ಗುರುತಿಸಿದ್ದ ಸಂಗೀತ ನಿರ್ದೇಶಕ ಪೂರ್ಣಚಂದ್ರ ತೇಜಸ್ವಿ ಹಾಗೂ ನಿರ್ದೇಶಕ ಪವನ್ ಕುಮಾರ್ “ಲೂಸಿಯಾ” ಚಿತ್ರದಲ್ಲಿ ಅವಕಾಶ ಕೊಟ್ಟರು. ಅಲ್ಲಿಂದ ನನ್ನ ಜರ್ನಿ ಆರಂಭವಾಯಿತು. ಆನಂತರ ಸಾಕಷ್ಟು ಚಿತ್ರಗಳಲ್ಲಿ ಹಾಡಿದ್ದೇನೆ. ನಾನು, ಸುನೀಲ್ ಮೈಸೂರು ಹಾಗೂ ಅನೇಕ ಸ್ನೇಹಿತರು ಸೇರಿ ಮನೋರಂಜನೆಯೇ ಪ್ರಧಾನವಾಗಿರುವ ಈ ಚಿತ್ರದ ಕಥೆ ಬರೆದಿದ್ದೇವೆ. ಅಮೇರಿಕಾಗೆ ಒಮ್ಮೆ ಹೋಗಿದ್ದಾಗ ಬೆನ್ ಚಿಕ್ಕಸ್ವಾಮಿ ಹಾಗೂ ಕೀರ್ತಿಸ್ವಾಮಿ ಅವರನ್ನು ಭೇಟಿ ಮಾಡಿದೆ. ಅವರ ಬಳಿ ಈ ಚಿತ್ರದ ಬಗ್ಗೆ ಹೇಳಿದಾಗ ಅವರು ನಾವೇ ಚಿತ್ರಕ್ಕೆ ಬಂಡವಾಳ ಹೂಡುತ್ತೇವೆ ಎಂದರು. ಈಗ ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ನಾನೇ ಸಂಗೀತ ಸಂಯೋಜಿಸಿರುವ ಐದು ಹಾಡುಗಳು ಈ ಚಿತ್ರದಲ್ಲಿದ್ದು, ಮೊದಲ ಹಾಡಾಗಿ “ಕೋಣಾಣೆ” ಬಿಡುಗಡೆಯಾಗಿದೆ. ಚಿತ್ರದ ಲೊಕೇಶನ್ ಹುಡುಕಾಟದ ಸಲುವಾಗಿ ಎಚ್ ಡಿ ಕೋಟೆಯ ಹಿರೇನಂದಿ ಗ್ರಾಮಕ್ಕೆ ಹೋಗಿದ್ದಾಗ ಅಲ್ಲಿ ಚಮ್ಮಮ್ಮ ಹಾಗೂ ಲಕ್ಷಮ್ಮ ಅವರು ಹೊಲದಲ್ಲಿ ಕೆಲಸ ಮಾಡುತ್ತಾ ಹಾಡುತ್ತಿದ್ದುದ್ದನ್ನು ನೋಡಿದೆ. ಇವರಿಂದ ನಮ್ಮ ಚಿತ್ರದ ಹಾಡೊಂದನ್ನು ಹಾಡಿಸಬೇಕು ಎಂದು ನಿರ್ಧರಿಸಿದೆ. ಅಂದುಕೊಂಡಂತೆ ಅವರಿಂದಲೇ ಈ ಹಾಡು ಹಾಡಿಸಿದ್ದೇನೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಉಳಿದ ಹಾಡುಗಳು ಸದ್ಯದಲ್ಲೇ ಬಿಡುಗಡೆಯಾಗಲಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರತಂಡದ ಸದಸ್ಯರಿಗೆ ಧನ್ಯವಾದ ಎಂದರು ಚಿತ್ರದ ನಾಯಕ ಹಾಗೂ ಸಂಗೀತ ನಿರ್ದೇಶಕ ನವೀನ್ ಸಜ್ಜು.

Naveen Sajju

ನಾನು ಬೆಂಗಳೂರಿನವಳು. ನನ್ನ ಪತಿ ಮಳವಳ್ಳಿಯವರು. ಮೂವತ್ತೈದು ವರ್ಷಗಳಿಂದ ಅಮೇರಿಕಾದಲ್ಲಿದ್ದೇವೆ. ಅಲ್ಲೂ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತೇವೆ. ನಮಗೆ ಕನ್ನಡ ಎಂದರೆ ಬಹಳ ಪ್ರೀತಿ. ಹೀಗೆ ಕಾರ್ಯಕ್ರಮವೊಂದರಲ್ಲಿ ನವೀನ್ ಸಜ್ಜು ಅವರನ್ನು ಭೇಟಿಯಾದಾಗ ಈ ಚಿತ್ರದ ಕುರಿತು ಹೇಳಿದರು. ಹಳ್ಳಿಯ ಸೊಗಡಿನ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು ಎಂದು ನಿರ್ಮಾಪಕಿ ಕೀರ್ತಿ ಸ್ವಾಮಿ ತಿಳಿಸಿದರು.

ನಾನು ಮಳವಳ್ಳಿಯವನು. ಚಿಕ್ಕವಯಸ್ಸಿನಲ್ಲೇ ಇದೇ ತರಹದ ಗ್ರಾಮೀಣ ಜನಪದ ಹಾಡುಗಳನ್ನು ಕೇಳುತ್ತಾ ಬೆಳೆದವನು. ನಲವತ್ತು ವರ್ಷಗಳಿಂದ ಅಮೇರಿಕಾದಲ್ಲಿದ್ದರೂ ಕನ್ನಡವನ್ನೇ ಮಾತನಾಡುತ್ತೇನೆ. ದಿನ ಮುದ್ದೆ , ಉಪ್ಸಾರು ತಿನ್ನುತ್ತೇನೆ. ನಮ್ಮ ಮನೆಗೆ ಬಂದವರಿಗೂ ನಾನೇ ಮಾಡಿ ಕೊಡುತ್ತೇನೆ. ಹಾಗಾಗಿ ನವೀನ್ ಸಜ್ಜು ಹಳ್ಳಿಯ ಸೊಗಡಿನ ಕಥೆ ಹೇಳಿದಾಗ ಬಹಳ ಖುಷಿಯಾಯಿತು ಎಂದು ನಿರ್ಮಾಪಕ ಬೆನ್ ಚಿಕ್ಕಸ್ವಾಮಿ ಹೇಳಿದರು. ಮೊದಲ ನಿರ್ದೇಶನದ ಚಿತ್ರ. ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದು ನಿರ್ದೇಶಕ ಧನುರ್ಧಾರಿ ಪವನ್ ತಿಳಿಸಿದರು. ಛಾಯಾಗ್ರಾಹಕ ರಿಷಿಕೇಶ್ ಸೇರಿದಂತೆ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಮಾರಂಭಕ್ಕೂ ಮುನ್ನ ನವೀನ್ ಸಜ್ಜು ಅನೇಕ ಜನಪ್ರಿಯ ಗೀತೆಗಳನ್ನು ಹಾಡಿ ನೆರೆದಿದವರನ್ನು ರಂಜಿಸಿದರು.

TAGGED:Dhanurdhari PavanKeerthy SwamyKonane Songlo naveenaNaveen SajjuNS Studioಎನ್‌.ಎಸ್‌ ಸ್ಟುಡಿಯೋಕೀರ್ತಿ ಸ್ವಾಮಿನವೀನ್ ಸಜ್ಜುಲೋ ನವೀನ ಸಾಂಗ್‌
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
38 seconds ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
21 minutes ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
40 minutes ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
51 minutes ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
2 hours ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?